ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿದ್ವಾರ: ರೈಲು ನಿಲ್ದಾಣ, ದೇಗುಲ ಸ್ಫೋಟಿಸುವ ಬೆದರಿಕೆ, ಕಟ್ಟೆಚ್ಚರ

Last Updated 16 ಅಕ್ಟೋಬರ್ 2022, 13:55 IST
ಅಕ್ಷರ ಗಾತ್ರ

ಹರಿದ್ವಾರ: ಉತ್ತರಾಖಂಡದ ಕೇದಾರನಾಥ ಮತ್ತು ಬದರೀನಾಥ ದೇವಾಲಯಗಳು ಸೇರಿದಂತೆ ಹಲವು ದೇವಾಲಯಗಳನ್ನು ಹಾಗೂ ರೈಲು ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಿರುವ ಪತ್ರವೊಂದು ಹರಿದ್ವಾರ ರೈಲು ನಿಲ್ದಾಣದ ಅಧಿಕಾರಿಗಳಿಗೆ ಲಭಿಸಿದ್ದು, ಪೊಲೀಸ್‌ ಹಾಗೂ ಗುಪ್ತಚರ ಇಲಾಖೆಗಳು ಕಟ್ಟೆಚ್ಚರ ವಹಿಸಿವೆ.

‘ಹರಿದ್ವಾರ ರೈಲು ನಿಲ್ದಾಣದ ಸೂಪರಿಂಟೆಂಡೆಂಟ್‌ ಅವರಿಗೆ ಈಚೆಗೆ ಅಂಚೆ ಮೂಲಕ ಪತ್ರ ಬಂದಿದೆ’ ಎಂದು ಸರ್ಕಾರಿ ರೈಲ್ವೆ ಪೊಲೀಸ್‌ನ (ಜಿಆರ್‌ಪಿ) ಅಧಿಕಾರಿಗಳು ತಿಳಿಸಿದ್ದಾರೆ.

‘ಪತ್ರ ಬರೆದಿರುವ ವ್ಯಕ್ತಿಯು ತನ್ನನ್ನು ಜೈಶ್ ಎ ಮೊಹಮ್ಮದ್‌ ಉಗ್ರ ಸಂಘಟನೆಯ ವಲಯ ಕಮಾಂಡರ್‌ ಜಮೀರ್‌ ಅಹಮ್ಮದ್‌ ಎಂದು ಪರಿಚಯಿಸಿಕೊಂಡಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿರುವ ಜಿಹಾದಿಗಳ ಹತ್ಯೆಗೆ ಪ್ರತೀಕಾರವಾಗಿ ಅಕ್ಟೋಬರ್‌ 25 ಮತ್ತು 27 ರಂದು ದಾಳಿ ನಡೆಸುವುದಾಗಿ ಪತ್ರದಲ್ಲಿ ಬರೆದಿದ್ದಾನೆ’ ಎಂದೂ ವಿವರಿಸಿದ್ದಾರೆ.

ಈ ಹಿಂದೆಯೂ ಇದೇ ರೀತಿಯ ಬೆದರಿಕೆ ಪತ್ರಗಳು ಬಂದಿದ್ದವು. ಆದರೆ ಇದೇ ಮೊದಲ ಬಾರಿಗೆ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT