ಅತ್ಯಾಚಾರ-ಕೊಲೆ ಪ್ರಕರಣ: ದೆಹಲಿ ಸರ್ಕಾರದ ಮರುಪರಿಶೀಲನಾ ಅರ್ಜಿಗೆ ಅಂಗೀಕಾರ

ದೆಹಲಿ: 2012ರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಮೂವರು ಅಪರಾಧಿಗಳನ್ನು ಖುಲಾಸೆಗೊಳಿಸಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮರುಪರಿಶೀಲನಾ ಅರ್ಜಿ ಸಲ್ಲಿಸಲು ದೆಹಲಿ ಸರ್ಕಾರ ಮಾಡಿದ ಮನವಿಯನ್ನು ಲೆಫ್ಟಿನೆಂಟ್ ಗವರ್ನರ್ ಅಂಗೀಕರಿಸಿದ್ದಾರೆ.
ಈ ಪ್ರಕರಣದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ದೆಹಲಿ ಸರ್ಕಾರವನ್ನು ಪ್ರತಿನಿಧಿಸುವುದಕ್ಕೂ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅನುಮತಿ ನೀಡಿದ್ದಾರೆ.
ಇದನ್ನೂ ಓದಿ: ಬಿಹಾರ ಅಪಘಾತ; ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಘೋಷಣೆ
2012 ಫೆಬ್ರುವರಿ 9ರಂದು ದೆಹಲಿಯ ದ್ವಾರಕಾದ ಛಾವ್ಲಾ ಪ್ರದೇಶದಲ್ಲಿ 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಮರಣದಂಡನೆ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿತ್ತು.
2022 ನವೆಂಬರ್ 7ರಂದು ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್ ಆದೇಶ ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್, ಮರಣದಂಡನೆಗೆ ಶಿಕ್ಷೆಗೆ ಗುರಿಯಾಗಿದ್ದ ಮೂವರನ್ನು ಖುಲಾಸೆಗೊಳಿಸಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.