ಶನಿವಾರ, ಸೆಪ್ಟೆಂಬರ್ 25, 2021
29 °C

ಬಿಹಾರ: ಸಿಡಿಲಿನ ಹೊಡೆತಕ್ಕೆ ಏಳು ಮಂದಿ ಮೃತ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಪ್ರಜಾವಾಣಿ ಚಿತ್ರ : ಅನೂಪ್ ರಾಘ . ಟಿ.

ಬಾಂಕಾ: ಸಿಡಿಲಿನ ಹೊಡೆತಕ್ಕೆ ಬಿಹಾರದ ಬಾಂಕಾ ಜಿಲ್ಲೆಯಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಮಂಗಲ್‌ ಪಾಂಡೆ ಮಾಹಿತಿ ನೀಡಿದ್ದಾರೆ.

ಬಾಂಕಾ ಜಿಲ್ಲೆಯಲ್ಲಿ ಸಿಡಿಲಿಗೆ 7 ಮಂದಿ ಮೃತಪಟ್ಟ ಸಂಗತಿಯಿಂದ ಬೇಸರವಾಗಿದೆ. ಮೃತ ಪಟ್ಟವರ ಕುಟುಂಬದ ಜೊತೆ ಬಿಹಾರ ಸರ್ಕಾರ ಇದೆ. ಮೃತರಿಗೆ ತೀವ್ರ ಸಂತಾಪಗಳು. ಸಿಡಿಲಿನ ಹೊಡೆತಕ್ಕೆ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಪಾಂಡೆ ಟ್ವೀಟ್‌ ಮಾಡಿದ್ದಾರೆ.

ಕಳೆದ ಎರಡು ದಶಕಗಳಲ್ಲಿ ಭಾರತ ದೇಶದಾದ್ಯಂತ ಗುಡುಗು, ಸಿಡಿಲುಗಳು ಹೆಚ್ಚಾಗಿವೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು