ಮಹೋಬಾ: ‘ಉತ್ತರ ಪ್ರದೇಶದಲ್ಲಿ ಸಿಡಿಲು ಬಡಿದ ಪ್ರತ್ಯೇಕ ಘಟನೆಗಳಲ್ಲಿ ಮೂವರು ಮೃತಪಟ್ಟಿದ್ದು, ಏಳು ಮಂದಿಗೆ ಗಾಯಗಳಾಗಿವೆ’ ಎಂದು ಅಧಿಕಾರಿಗಳು ಬುಧವಾರ ತಿಳಿಸಿದರು.
ಮಕರಾಬಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಸಿಡಿಲು ಬಡಿದು 21 ವರ್ಷದ ಪ್ರೀತಿ ಎಂಬವರು ಮೃತಪಟ್ಟಿದ್ದಾರೆ. ಗ್ಯೊಡಿ ಮತ್ತು ಬಿಜ್ರಾರಿ ಗ್ರಾಮಗಳಲ್ಲಿ ಕ್ರಮವಾಗಿ ರೈತರಾದ ನರೇಂದ್ರ ಮತ್ತು ಭಗವಾನ್ ದಾನ್ ಎಂಬವರು ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ.
ಕಮಲಪುರ ಗ್ರಾಮದಲ್ಲೂ ಸಿಡಿಲು ಬಡಿದು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಏಳು ಮಹಿಳೆಯರಿಗೆ ಗಾಯಗಳಾಗಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.