ಜೈಪುರ: ಇಲ್ಲಿನ ಸಮೀಪದ 12ನೇ ಶತಮಾನದ ಅಮೆರ್ ಪ್ಯಾಲೆಸ್‌ನಲ್ಲಿ ಭಾನುವಾರ ರಾತ್ರಿ ಸಿಡಿಲು ಬಡಿದು 11 ಜನರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ.

ಅಮೆರ್ ಪ್ಯಾಲೆಸ್‌ನ ವಾಚ್ ಟವರ್ ಮೇಲೆ ಜನರು ಮಳೆಯಲ್ಲೇ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಸಿಡಿಲು ಬಡಿದ ಪರಿಣಾಮ ಈ ದುರಂತ ಸಂಭವಿಸಿದೆ. ಕೆಲವರು ಸಿಡಿಲಿನ ಭಯಕ್ಕೆ ವಾಚ್ ಟವರ್ ಮೇಲಿಂದ ಧುಮುಕಿ ಗಾಯಗೊಂಡಿದ್ದಾರೆ ಎಂದು ರಾಜಸ್ಥಾನ ಪೊಲೀಸರು ತಿಳಿಸಿದ್ದಾರೆ.

ಸಿಡಿಲು ಬಡಿದಾಗ ವಾಚ್ ಟವರ್ ಮೇಲೆ 27 ಜನರು ಇದ್ದರು ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಘಟನೆ ಬಗ್ಗೆ ಸಂತಾಪ ಸೂಚಿಸಿರುವ ರಾಜಸ್ಥಾನಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮೃತಪಟ್ಟವರ ಕುಟುಂಬಗಳಿಗೆ ₹ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.