ಪಿಲಿಭಿತ್: ಪಶ್ಚಿಮ ಬಂಗಾಳದಂತೆ ಉತ್ತರ ಪ್ರದೇಶದಲ್ಲೂ ಬಿಜೆಪಿ ವಿರೋಧಿ ವಾತಾವರಣ ಸೃಷ್ಟಿಸಲು ಪ್ರಯತ್ನ ಮಾಡಲಾಗುವುದು ಎಂದು ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಈ ಮೂಲಕ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ತಮ್ಮ ರಾಜಕೀಯ ಉದ್ದೇಶವನ್ನು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಟಿಕಾಯತ್, 'ಮುಂಬರುವ ಉತ್ತರ ಪ್ರದೇಶದ ವಿಧಾನಸಭಾ ಚುನಾಣೆಯಲ್ಲಿ ಬಿಕೆಯು ಸ್ಪರ್ಧಿಸುವುದಿಲ್ಲ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ ಬೆಂಬಲವನ್ನು ನೀಡುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ರೈತರು ಆಕ್ರೋಶಭರಿತರಾಗಿದ್ದು, ಸರ್ಕಾರ ಹಾಗೂ ಬಿಜೆಪಿ ವಿರೋಧಿ ವಾತಾವರಣವನ್ನು ನಿರ್ಮಾಣ ಮಾಡಲು ಕೆಲಸ ಮಾಡಲಿದ್ದಾರೆ' ಎಂದು ಹೇಳಿದ್ದಾರೆ.
'ಸರ್ಕಾರದ ನೀತಿಗಳಿಂದ ಪ್ರಯೋಜನ ಸಿಗದಿದ್ದರೆ ರೈತರು ಬಿಜೆಪಿಗೆ ಮತದಾನ ಮಾಡುವುದಿಲ್ಲ. ಪಶ್ಚಿಮ ಬಂಗಾಳದಂತೆ ಉತ್ತರ ಪ್ರದೇಶದಲ್ಲೂ ಕೇಸರಿ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಕೆಲಸ ಮಾಡಲಿದ್ದೇವೆ' ಎಂದಿದ್ದಾರೆ.
ಅದೇ ಹೊತ್ತಿಗೆ ಮುಜಾಫರನಗರದಲ್ಲಿ ಸೆಪ್ಟೆಂಬರ್ 5ರಂದು ಐತಿಹಾಸಿಕ 'ಕಿಸಾನ್ ಮಹಾಪಂಚಾಯಿತಿ' ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕಳೆದ ಏಳು ತಿಂಗಳುಗಳಿಂದ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ಸುತ್ತಿನ ಮಾತುಕತೆಗಳು ನಡೆದರೂ ಯಾವುದೇ ಪ್ರಯೋಜನವುಂಟಾಗಲಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.