ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರ ವಿರುದ್ಧ ಅತಿ ಹೆಚ್ಚು ಅಪರಾಧಗಳು ನಡೆದ ರಾಜ್ಯಗಳ ಪಟ್ಟಿ ಬಿಡುಗಡೆ...

Last Updated 30 ಆಗಸ್ಟ್ 2022, 3:17 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್‌ಸಿಆರ್‌ಬಿ)ದ 2019-2021ರ ನಡುವಿನ ಅಂಕಿಅಂಶಗಳು ಸೋಮವಾರ ಬಿಡುಗಡೆಯಾಗಿವೆ. ಉತ್ತರ ಪ್ರದೇಶದಲ್ಲಿ 2021ರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಿವೆ.

ಕಳೆದ ವರ್ಷ ಉತ್ತರ ಪ್ರದೇಶದಲ್ಲಿ ದಾಖಲಾದ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ 56,083. ಇದು ದೇಶದಲ್ಲೇ ಅತಿ ಹೆಚ್ಚು ಎನಿಸಿಕೊಂಡಿದೆ.

ಉತ್ತರ ಪ್ರದೇಶದ ನಂತರ ರಾಜಸ್ಥಾನದಲ್ಲಿ 40,738 ಪ್ರಕರಣಗಳು ದಾಖಲಾಗಿವೆ. 39,526 ಪ್ರಕರಣಗಳೊಂದಿಗೆ ಮಹಾರಾಷ್ಟ್ರ ಮೂರನೇ ಸ್ಥಾನದಲ್ಲಿದೆ. ಪಶ್ಚಿಮ ಬಂಗಾಳ (35,884) ಮತ್ತು ಒಡಿಶಾ (31,352) ನಂತರದ ಸ್ಥಾನದಲ್ಲಿವೆ.

2021ರಲ್ಲಿ ಕರ್ನಾಟಕದಲ್ಲಿ 14,468 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲವಾಗಿವೆ ಎಂದು ಎನ್‌ಸಿಆರ್‌ಬಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ದೆಹಲಿಯಲ್ಲಿ 14,277 ಪ್ರಕರಣಗಳು ವರದಿಯಾಗಿದ್ದವು.

ಮಹಿಳೆಯರಿಗೆ ಅತ್ಯಂತ ಅಸುರಕ್ಷಿತ ನಗರ ಎನಿಸಿಕೊಂಡಿರುವ ರಾಷ್ಟ್ರ ರಾಜಧಾನಿಯಲ್ಲಿ ಕಳೆದ ವರ್ಷ ಪ್ರತಿದಿನ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆದಿರುವುದು ಎನ್‌ಸಿಆರ್‌ಬಿ ವರದಿಯಲ್ಲಿ ಬಹಿರಂಗಗೊಂಡಿದೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT