ನವದೆಹಲಿ(ಪಿಟಿಐ): ಬಿಹಾರದ ಸಮಷ್ಠಿಪುರ ಲೋಕಸಭಾ ಕ್ಷೇತ್ರದ ಲೋಕ ಜನಶಕ್ತಿ ಪಾರ್ಟಿ (ಎಲ್‌ಜೆಪಿ) ಸಂಸದ ಪ್ರಿನ್ಸ್ ಪಾಸ್ವಾನ್ ವಿರುದ್ಧ ದೆಹಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.
‘ನ್ಯಾಯಾಲಯದ ನಿರ್ದೇಶನದ ಅನ್ವಯ ಸಂಸದ ಪ್ರಿನ್ಸ್ ಪಾಸ್ವಾನ್ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ‘ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ನ್ಯಾಯಾಲಯದ ನಿರ್ದೇಶನದ ಮೇರೆಗೆ, ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ವಿವಿಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ‘ ಎಂದು ಅಧಿಕಾರಿ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.