ಮಂಗಳವಾರ, ಮಾರ್ಚ್ 21, 2023
31 °C

ನಿರೀಕ್ಷಣಾ ಜಾಮೀನು ಕೋರಿ ದೆಹಲಿ ನ್ಯಾಯಾಲಯದ ಮೊರೆ ಹೋದ ಎಲ್‌ಜೆಪಿ ಸಂಸದ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆ ನೀಡುವಂತೆ ಕೋರಿ ಲೋಕ ಜನಶಕ್ತಿ ಪಕ್ಷದ ಸಂಸದ ಪ್ರಿನ್ಸ್ ರಾಜ್ ಮಂಗಳವಾರ ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ವಿಶೇಷ ನ್ಯಾಯಾಧೀಶ ಎಂ.ಕೆ.ನಾಗಪಾಲ್ ಅವರ ಮುಂದೆ ನಿರೀಕ್ಷಣಾ ಜಾಮೀನು ಅರ್ಜಿ ಗುರುವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.

ನ್ಯಾಯಾಲಯದ ನಿರ್ದೇಶನದ ಮೇರೆಗೆ ಪ್ರಕರಣ ದಾಖಲಾದ ನಂತರ ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ಸೋದರಳಿಯ ರಾಜ್ ಪರವಾಗಿ ವಕೀಲ ನಿತೇಶ್ ರಾಣಾ ಅರ್ಜಿ ಸಲ್ಲಿಸಿದರು.

ಇದನ್ನೂ ಓದಿ: 

ಆಪಾದಿತ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಹಣ ವಸೂಲಿ ಮಾಡುತ್ತಿದ್ದು, ರಾಜ್ ಅವರನ್ನು ಬ್ಲ್ಯಾಕ್ ಮೇಲ್ ಮಾಡಲಾಗುತ್ತಿದೆ. ಈ ಸಂಬಂಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ಮಹಿಳೆ ಮತ್ತು ಆಕೆಯ ಸಹಚರರಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ..

ರಾಜ್ ಅವರು ಬಿಹಾರದ ಸಮಸ್ತಿಪುರದ ಸಂಸತ್ ಸದಸ್ಯರಾಗಿದ್ದಾರೆ.

ಈ ವರ್ಷದ ಮೇ ತಿಂಗಳಿನಲ್ಲಿ ಮಹಿಳೆ ಇಲ್ಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ದೆಹಲಿ ನ್ಯಾಯಾಲಯದ ಆದೇಶದ ಮೇರೆಗೆ ದೆಹಲಿ ಪೊಲೀಸರು ಪ್ರಿನ್ಸ್ ರಾಜ್ ವಿರುದ್ಧ ಸೆಪ್ಟೆಂಬರ್ 9 ರಂದು ಎಫ್ಐಆರ್ ದಾಖಲಿಸಿದ್ದರು.

ತಾನು ಎಲ್‌ಜೆಪಿ ಕಾರ್ಯಕರ್ತೆ ಎಂದು ಹೇಳಿಕೊಂಡಿರುವ ಮಹಿಳೆ, ತಾನು ಪ್ರಜ್ಞಾಹೀನಳಾಗಿದ್ದಾಗ ರಾಜ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು