ನವದೆಹಲಿ: ಕಳೆದ ವರ್ಷ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಸೋಲಿನ ನಂತರ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷಕ್ಕೆ (ಎಲ್‌ಜೆಪಿ) ಮತ್ತೊಂದು ಸಂಕಷ್ಟ ಎದುರಾಗಿದೆ.

ಲೋಕಸಭೆಯಲ್ಲಿ ಸಂಸದೀಯ ಪಕ್ಷದ ನಾಯಕ ಸ್ಥಾನದಿಂದ ಚಿರಾಗ್ ಪಾಸ್ವಾನ್ ಅವರನ್ನು ತೆಗೆದುಹಾಕಲು ಎಲ್‌ಜೆಪಿಯ ಆರು ಸಂಸದರಲ್ಲಿ ಐವರು ನಿರ್ಧರಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಚಿರಾಗ್ ಪಾಸ್ವಾನ್ ಅವರ ಸ್ಥಾನಕ್ಕೆ ಹಾಜಿಪುರ ಸಂಸದ ಪಶುಪತಿ ಕುಮಾರ್ ಪಾರಸ್ ಅವರನ್ನು ಆಯ್ಕೆ ಮಾಡುವ ತೀರ್ಮಾನವನ್ನು ಎಲ್‌ಜೆಪಿ ಸಂಸದರು ತೆಗೆದುಕೊಂಡಿದ್ದಾರೆ.

ಈ ಹೊಸ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಲೋಕಸಭಾ ಸ್ವೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿರುವ ಎಲ್‌ಜೆಪಿ ಸಂಸದರು ಪತ್ರವೊಂದನ್ನು ಸಲ್ಲಿಸಿದ್ದಾರೆ ಎಂದು ಎಎನ್‌ಐ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.