ಶನಿವಾರ, ಸೆಪ್ಟೆಂಬರ್ 19, 2020
22 °C

ವಿಮಾನ ನಿಲ್ದಾಣ ಭದ್ರತೆಗೆ ಸ್ಥಳೀಯ ಭಾಷೆ ಬಲ್ಲವರ ನಿಯೋಜನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ಸ್ಥಳೀಯ ಭಾಷೆ ಅಥವಾ ಇಂಗ್ಲಿಷ್‌ನ ಪ್ರಾಥಮಿಕ ಜ್ಞಾನ ಇರುವವರನ್ನೇ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಪರ್ಕಕ್ಕೆ ಬರುವ ಸ್ಥಳಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಸಾಧ್ಯವಿರುವಷ್ಟರ ಮಟ್ಟಿಗೆ ನಿಯೋಜಿಸಲಾಗುವುದು ಎಂದು ಭಾರತದ ವಿಮಾನ ನಿಲ್ದಾಣಗಳ ಭದ್ರತೆಯ ಹೊಣೆ ಹೊತ್ತಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್‌) ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಎಲ್ಲ ವಿಮಾನ ನಿಲ್ದಾಣಗಳಲ್ಲಿಯೂ ಸ್ಥಳೀಯ ಭಾಷೆ ಬಲ್ಲವರನ್ನು ನೂರರಷ್ಟು ನಿಯೋಜಿಸುವುದು ಸಾಧ್ಯವಾಗದು ಎಂದೂ ಅವರು ತಿಳಿಸಿದ್ದಾರೆ.

‘ಹಿಂದಿ ಗೊತ್ತಿಲ್ಲದ ನೀವು ಭಾರತೀಯರೇ’ ಎಂದು ಡಿಎಂಕೆ ಸಂಸದೆ ಕನಿಮೊಳಿ ಅವರನ್ನು ಚೆನ್ನೈ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಯೊಬ್ಬರು ಕೆಲ ದಿನಗಳ ಹಿಂದೆ ಪ್ರಶ್ನಿಸಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು