ಗುರುವಾರ , ನವೆಂಬರ್ 26, 2020
21 °C

ಪಶ್ಚಿಮ ಬಂಗಾಳ: ಸ್ಥಳೀಯ ರೈಲು ಸಂಚಾರ ಪುನರಾಂಭಕ್ಕೆ ಚಿಂತನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಸ್ಥಳೀಯ ರೈಲುಗಳ ಸಂಚಾರ ಸೇವೆಯನ್ನು ಒಟ್ಟು ಆಸನ ಸಾಮರ್ಥ್ಯದಲ್ಲಿ ಶೇ 50ರ ಪ್ರಯಾಣಿಕರಿಗೆ ಅನುವು ಮಾಡಿಕೊಡುವ ಮೂಲಕ ಆರಂಭಿಸಲು ಚಿಂತನೆ ನಡೆದಿದೆ. ಈ ವೇಳೆ ಕೋವಿಡ್ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲಾಗುವುದು ಎಂದು ಅಧಿಕಾರಿಗಳು ಸೋಮವಾರ ತಿಳಿಸಿದರು.

ಆರಂಭದಲ್ಲಿ ಕೇವಲ ಶೇ. 10–20 ರಷ್ಟು ರೈಲುಗಳ ಸಂಚಾರ ಇರಲಿದ್ದು, ಬಳಿಕ ನಿಧಾನವಾಗಿ ಶೇ 25ಕ್ಕೆ ವಿಸ್ತರಿಸಲಾಗುವುದು ಎಂದು ತಿಳಿಸಿದರು. 

ಟಿಕೆಟ್‌ ಮಾರಾಟದ ಕ್ರಮ, ಕಾರ್ಯನಿರ್ವಹಿಸಲಿರುವ ರೈಲುಗಳ ಸಂಖ್ಯೆ, ಅವುಗಳ ಮಾರ್ಗಗಳ ಬಗ್ಗೆ ಯೋಜನೆ ರೂಪಿಸಲಾಗಿದೆ. ನ.5ರಂದು ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ ಅವರು ಮಾಹಿತಿ ನೀಡಿದರು.

ಪೂರ್ವ ರೈಲ್ವೆ ಮತ್ತು ಆಗ್ನೇಯ ರೈಲ್ವೆಯ ಹಿರಿಯ ಅಧಿಕಾರಿಗಳು, ಬಂಡ್ಯೋಪಾಧ್ಯಾಯ ಸೇರಿದಂತೆ ಇತರೆ ಉನ್ನತ ಅಧಿಕಾರಿಗಳನ್ನು ಸೋಮವಾರ ಭೇಟಿ ನೀಡಿ, ಈ ಬಗ್ಗೆ ಚರ್ಚೆ ನಡೆಸಿದರು. ರೈಲ್ವೆ ನಿಲ್ದಾಣಗಳಲ್ಲಿ ಹೆಚ್ಚಿನ ಜನದಟ್ಟಣೆ ಆಗದಂತೆ ನೋಡಿಕೊಳ್ಳಬೇಕು. ಈ ಬಗ್ಗೆಯೂ ಯೋಜನೆ ರೂಪಿಸಬೇಕಾಗಿದೆ ಎಂದು ಅವರು ತಿಳಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು