ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಸಿಂಘು ಗಡಿಯಲ್ಲಿ ಪ್ರತಿಭಟನಾ ಸ್ಥಳ ತೆರವುಗೊಳಿಸುವಂತೆ ಸ್ಥಳೀಯರಿಂದ ಆಗ್ರಹ

Last Updated 28 ಜನವರಿ 2021, 8:59 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ–ಹರಿಯಾಣದ ಸಿಂಘು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸುವಂತೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಪಂಜಾಬ್, ಹರಿಯಾಣ ಸೇರಿದಂತೆ ವಿವಿಧ ಭಾಗಗಳ ರೈತರು ದೆಹಲಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಗಣರಾಜ್ಯೋತ್ಸವ ದಿನದಂದು ರೈತರು ನಡೆಸಿದ ಟ್ರ್ಯಾಕ್ಟರ್‌ ರ‍್ಯಾಲಿ ಹಿಂಸಾತ್ಮಕ ರೂಪಕ್ಕೆ ತಿರುಗಿತ್ತು. ಘಟನೆಯಲ್ಲಿ ಒಬ್ಬ ರೈತ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

20ಕ್ಕೂ ಹೆಚ್ಚು ರೈತ ಸಂಘಟನೆಗಳ ಮುಖಂಡರ ವಿರುದ್ಧ ಷರತ್ತು ಉಲ್ಲಂಘಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

ಹಿಂಸಾಚಾರದ ಬಳಿಕ ಕೆಂಪುಕೋಟೆ ಸೇರಿದಂತೆ ದೆಹಲಿಯ ಪ್ರಮುಖ ಭಾಗಗಳು ಮತ್ತು ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳಗಳಲ್ಲಿ ಅರೆ ಸೇನಾಪಡೆಯನ್ನು ನಿಯೋಜಿಸಲಾಗಿದೆ.

ಇವುಗಳನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT