ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ, ಮಹಾರಾಷ್ಟ್ರ: ಹಂತಹಂತವಾಗಿ ಲಾಕ್‌ಡೌನ್‌ ತೆರವು

Last Updated 5 ಜೂನ್ 2021, 22:38 IST
ಅಕ್ಷರ ಗಾತ್ರ

ನವದೆಹಲಿ/ಮುಂಬೈ/ಚೆನ್ನೈ: ಕೋವಿಡ್‌ ಎರಡನೇ ಅಲೆ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್‌ ಅನ್ನು ಸೋಮವಾರದಿಂದ ಅನ್ವಯವಾಗುವಂತೆ ಹಂತ ಹಂತವಾಗಿ ತೆರವುಗೊಳಿಸಲು ಮಹಾರಾಷ್ಟ್ರ ಮತ್ತು ದೆಹಲಿ ಸರ್ಕಾರಗಳು ನಿರ್ಧರಿಸಿವೆ.

ಹಲವು ವಿನಾಯಿತಿಗಳೊಂದಿಗೆ ತಮಿಳುನಾಡು ಸರ್ಕಾರ ಜೂನ್‌ 14ರ ವರೆಗೆ ಲಾಕ್‌ಡೌನ್‌ ವಿಸ್ತರಣೆ ಮಾಡಿದೆ. ಮಹಾರಾಷ್ಟ್ರದ ವಿಪತ್ತು ನಿರ್ವಹಣಾ ಘಟಕವು ಕೋವಿಡ್‌ ದೃಢ ಪ್ರಮಾಣ ಹಾಗೂ ಆಮ್ಲಜನಕ ಸೌಲಭ್ಯ ಹೊಂದಿದ ಹಾಸಿಗೆಗಳು ಭರ್ತಿಯಾಗಿರುವ ಆಧಾರದಲ್ಲಿ ರಾಜ್ಯವನ್ನು ಐದು ಹಂತಗಳನ್ನಾಗಿ ವಿಂಗಡಿಸಿದೆ.

ಇದರ ಆಧಾರದಲ್ಲಿ ಲಾಕ್‌ಡೌನ್‌ನ ನಿರ್ಬಂಧಗಳನ್ನು ಸಡಿಲಿಸಲಾಗುತ್ತದೆ. ಮುಂಬೈ ನಗರವು 3ನೇ ಹಂತದ ವ್ಯಾಪ್ತಿಯಲ್ಲಿ ಬರಲಿದ್ದು ಇಲ್ಲಿ ನಿರ್ಬಂಧಗಳನ್ನು ಭಾಗಶಃ ತೆರವುಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಶೇ 50ರಷ್ಟು ಪ್ರಯಾಣಿಕರೊಂದಿಗೆ ಮೆಟ್ರೊ ರೈಲು ಸಂಚಾರ ಮಾಡಲಿವೆ. ಸರಿ–ಬೆಸ ಸಂಖ್ಯೆಯ ಆಧಾರದಲ್ಲಿ ಬೆಳಿಗ್ಗೆ 10ರಿಂದ ರಾತ್ರಿ 8ರ ವರೆಗೆ ಮಾರುಕಟ್ಟೆಗಳು ಮತ್ತು ಮಾಲ್‌ಗಳು ತೆರೆಯಲು ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ತಿಳಿಸಿದರು.

ಶೇ 50ರಷ್ಟು ಹಾಜರಾತಿಯೊಂದಿಗೆ ಸರ್ಕಾರಿ ಮತ್ತು ಖಾಸಗಿ ಕಚೇರಿಗಳನ್ನು ತೆರಯಲು ಅವಕಾಶ ನೀಡಲಾಗುವುದು ಎಂದೂ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT