ಗುರುವಾರ , ಆಗಸ್ಟ್ 18, 2022
24 °C

ಬಿಹಾರದಲ್ಲಿ ಮೇ 25ರವರೆಗೆ ಲಾಕ್‌ಡೌನ್‌ ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ಪಾಟ್ನಾ (ಪಿಟಿಐ): ಬಿಹಾರದಲ್ಲಿ ಲಾಕ್‌ಡೌನ್‌ ಅವಧಿಯನ್ನು ಮೇ 25ರವರೆಗೂ ವಿಸ್ತರಿಸಲಾಗಿದೆ. ಮುಖ್ಯಮಂತ್ರಿ ನಿತೀಶ್‌ ಕುಮಾರ್ ಈ ತೀರ್ಮಾನ ಪ್ರಕಟಿಸಿದರು. ಈ ಮೊದಲು ಮೇ 15ರವರೆಗೆ ಲಾಕ್‌ಡೌನ್‌ ವಿಧಿಸಲಾಗಿತ್ತು.

ಸಂಪುಟ ಸದಸ್ಯರು, ಅಧಿಕಾರಿಗಳ ಜೊತೆಗೆ ಪರಿಸ್ಥಿತಿ ಚರ್ಚಿಸಲಾಯಿತು. ಲಾಕ್‌ಡೌನ್‌ನಿಂದ ಸಕಾರಾತ್ಮಕ ಪರಿಣಾಮವಾಗಿದೆ. ಹೀಗಾಗಿ, ಅವಧಿಯನ್ನು 10 ದಿನ ವಿಸ್ತರಿಸಲಾಗಿದೆ ಎಂದೂ ಅವರು ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಬುಧವಾರ 9,863 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದವು. ಹದಿನೈದು ದಿನಗಳ ಹಿಂದೆ ನಿತ್ಯ 10 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿ ಆಗುತ್ತಿದ್ದವು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು