ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಜೂನ್‌ 1ರವರೆಗೆ ಲಾಕ್‌ಡೌನ್‌ ವಿಸ್ತರಣೆ

Last Updated 13 ಮೇ 2021, 8:10 IST
ಅಕ್ಷರ ಗಾತ್ರ

ಮುಂಬೈ: ಕೋವಿಡ್‌ ಪಿಡುಗನ್ನು ನಿಯಂತ್ರಿಸುವ ಸಲುವಾಗಿ ಮಹಾರಾಷ್ಟ್ರ ಸರ್ಕಾರವು ಲಾಕ್‌ಡೌನ್‌ ಮಾದರಿಯ ನಿರ್ಬಂಧಗಳನ್ನು ಜೂನ್‌ 1ರ ವರೆಗೆ ವಿಸ್ತರಿಸಿದೆ.

ರಾಜ್ಯದ ಮುಖ್ಯ ಕಾರ್ಯದರ್ಶಿ ಸೀತಾರಾಂ ಕುಂಟೆ ಅವರು ಗುರುವಾರ ಈ ಬಗ್ಗೆ ಆದೇಶ ಹೊರಡಿಸಿದ್ದು, ಜೂನ್‌ 1ರ ಬೆಳಿಗ್ಗೆ 7 ಗಂಟೆಯವರೆಗೆ ನಿರ್ಬಂಧಗಳು ಜಾರಿಯಲ್ಲಿರಲಿವೆ ಎಂದು ಅವರು ಹೇಳಿದ್ದಾರೆ.

ಈ ಆದೇಶದಂತೆ, ರಾಜ್ಯದೊಳಗೆ ಯಾವುದೇ ವಿಧದ ಸಾರಿಗೆಯ ಮೂಲಕ ಬಂದವರೂ ಆರ್‌ಟಿ–ಪಿಸಿಆರ್‌ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ. 48 ಗಂಟೆಗಳ ಒಳಗೆ ಇಂತಹ ವರದಿ ಪಡೆದಿರಬೇಕು. ಸರಕು ಸಾಗಣೆ ವಾಹನಗಳಲ್ಲಿ ಇಬ್ಬರಗಿಂತ ಹೆಚ್ಚು ಮಂದಿ ಪ್ರಯಾಣಿಸುವಂತಿಲ್ಲ. ಈ ವಾಹನಗಳಲ್ಲಿ ಇದ್ದವರೂ ನೆಗೆಟಿವ್‌ ವರದಿ ಪಡೆದಿರುವುದು ಕಡ್ಡಾಯವಾಗಿದ್ದು, 7 ದಿನ ರಾಜ್ಯದೊಳಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಏಪ್ರಿಲ್‌ 5ರಂದು ಸಂಪೂರ್ಣ ಲಾಕ್‌ಡೌನ್‌ ರೀತಿಯ ನಿರ್ಬಂಧಗಳನ್ನು ಜಾರಿಗೊಳಿಸಲಾಗಿತ್ತು. ಸೆಕ್ಷನ್‌ 144 ವಿಧಿಸುವ ಮೂಲಕ ಏಪ್ರಿಲ್‌ 15ರಂದು ಈ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT