ಮಂಗಳವಾರ, ಜೂನ್ 22, 2021
28 °C

ತಮಿಳುನಾಡು: ಜೂ.14ರವರೆಗೆ ಲಾಕ್‌ಡೌನ್‌ ವಿಸ್ತರಣೆ, ಭಾಗಶಃ ವಿನಾಯಿತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ (ಪಿಟಿಐ): ತಮಿಳುನಾಡಿನಲ್ಲಿ ಲಾಕ್‌ಡೌನ್‌ ಅನ್ನು ಜೂನ್‌ 14ರವರೆಗೂ ರಾಜ್ಯ ಸರ್ಕಾರ ವಿಸ್ತರಿಸಿದೆ. ಅಲ್ಲದೆ, ಈ ಅವಧಿಯಲ್ಲಿ ಅಗತ್ಯ ವಸ್ತುಗಳ ಮಾರಾಟ ಹಾಗೂ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣೆಗೆ ಅವಕಾಶ ಒಳಗೊಂಡಂತೆ ಕೆಲ ವಿನಾಯಿತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಿಳಿಸಿದರು.

ರಾಜ್ಯದಲ್ಲಿ ಒಟ್ಟಾರೆ ಕೋವಿಡ್‌ ಪ್ರಕರಣಗಳು ಇಳಿಮುಖವಾಗಿವೆ. ಆದರೆ, ಕೊಯಮತ್ತೂರು ಮತ್ತು ನೀಲಗಿರಿ ಸೇರಿದಂತೆ 11 ಜಿಲ್ಲೆಗಳಲ್ಲಿ ಏರುಗತಿಯಲ್ಲಿವೆ. ಇಲ್ಲಿ ಭಾಗಶಃ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದರು.

11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಡೆ ಪ್ರಾವಿಷನ್‌ ಸ್ಟೋರ್‌ಗಳು, ತರಕಾರಿ, ಮಾಂಸ ಮತ್ತು ಮೀನು ಮಾರಾಟ, ಹೂವುಗಳ ಮಾರಾಟಕ್ಕೆ ಬೆಳಿಗ್ಗೆ 6 ರಿಂದ ಸಂಜೆ 5ರವರೆಗೂ ಅವಕಾಶ ನೀಡಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಶೇ 30ರಷ್ಟು ಸಿಬ್ಬಂದಿ ಹಾಜರಿಗೆ ಅವಕಾಶವಿದೆ. ಉಪ ನೋಂದಣಾಧಿಕಾರಿಗಳ ಕಚೇರಿಯು ನಿತ್ಯ 50 ಟೋಕನ್‌ಗಳನ್ನು ವಿತರಿಸಬಹುದು ಎಂದು ಮುಖ್ಯಮಂತ್ರಿಗಳ ಕಚೇರಿ ಹೇಳಿಕೆ ತಿಳಿಸಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು