ಗುರುವಾರ , ಸೆಪ್ಟೆಂಬರ್ 23, 2021
27 °C

ಲೋಕಸಭೆ ಅಧಿವೇಶನ ಅನಿರ್ದಿಷ್ಟಾವಧಿ ಮುಂದೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಲೋಕಸಭೆಯ ಮುಂಗಾರು ಅಧಿವೇಶನದ ಕಲಾಪವನ್ನು ಬುಧವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

ಇದಕ್ಕೂ ಮುನ್ನ ಇತ್ತೀಚೆಗೆ ನಿಧನರಾದ ನಾಲ್ವರು ಮಾಜಿ ಸಂಸತ್‌ ಸದಸ್ಯರಿಗೆ ಸದನವು ಗೌರವ ಸಲ್ಲಿಸಿತು.‌ ಈ ವೇಳೆ  ಪ್ರಧಾನಿ ನರೇಂದ್ರ ಮೋದಿ ಸದನದಲ್ಲಿ ಹಾಜರಿದ್ದರು.

ಜುಲೈ 19 ರಂದು ಅಧಿವೇಶನ ಆರಂಭವಾದಾಗಿನಿಂದಲೂ ವಿರೋಧ ಪಕ್ಷಗಳು ಪೆಗಾಸಸ್ ಗೂಢಚರ್ಯೆ, ಕೃಷಿ ಕಾಯ್ದೆಗಳು ಮತ್ತು ಇತರ ವಿಷಯಗಳ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿ ನಿರಂತರವಾಗಿ ಪ್ರತಿಭಟನೆ ನಡೆಸಿ, ಕಲಾಪಕ್ಕೆ ಅಡ್ಡಿಯುಂಟು ಮಾಡಿದ್ದವು. ಇದರಿಂದಾಗಿ, ಕಲಾಪವನ್ನು ಪದೇ ಪದೇ ಮುಂದೂಡಲಾಗುತ್ತಿತ್ತು.

ಇಡೀ ಅಧಿವೇಶನದಲ್ಲಿ ಪ್ರಶ್ನೋತ್ತರ ಸಮಯವನ್ನೂ ಪ್ರತಿಭಟನೆಗಳು ನುಂಗಿ ಹಾಕಿದವು. ವಿರೋಧ ಪಕ್ಷಗಳ ಗದ್ದಲದ ನಡುವೆಯೂ ರಾಜ್ಯಗಳಿಗೆ ತಮ್ಮದೇ ಪ್ರತ್ಯೇಕ ಇತರೆ ಹಿಂದುಳಿದ ವರ್ಗಗಳ ಪಟ್ಟಿಯನ್ನು ಸಿದ್ಧಪಡಿಸುವ ಅಧಿಕಾರವನ್ನು ಮರುಸ್ಥಾಪಿಸುವ ಸಂವಿಧಾನ ತಿದ್ದುಪಡಿ ಮಸೂದೆ ಸೇರಿದಂತೆ ಹಲವು ಮಸೂದೆಗಳನ್ನು ಅಂಗೀಕರಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು