ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್ತಿನ ಉಭಯ ಸದನಗಳ ಬಜೆಟ್ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

Last Updated 7 ಏಪ್ರಿಲ್ 2022, 6:56 IST
ಅಕ್ಷರ ಗಾತ್ರ

ನವದೆಹಲಿ:ಸಂಸತ್ತಿನ ಉಭಯ ಸದನಗಳಲ್ಲಿಬಜೆಟ್ ಅಧಿವೇಶನದ ಕಲಾಪವನ್ನು ಗುರುವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

ಅಧಿವೇಶನವನ್ನು ನಿಗದಿತ ಸಮಯಕ್ಕಿಂತ ಒಂದು ದಿನ ಮುಂಚಿತವಾಗಿ (ಗುರುವಾರ) ಮುಕ್ತಾಯಗೊಳಿಸಲಾಗಿದೆ.

ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31 ರಂದು ಪ್ರಾರಂಭವಾಗಿತ್ತು. ಕೇಂದ್ರ ಬಜೆಟ್ ಮಂಡನೆ ನಂತರ ಫೆಬ್ರುವರಿ 11ರಂದು ಮೊದಲಾರ್ಧ ಅಧಿವೇಶನ ಕೊನೆಗೊಂಡಿತ್ತು.

ಬಜೆಟ್ ಅಧಿವೇಶನದ ದ್ವಿತೀಯಾರ್ಧವು ಮಾರ್ಚ್ 14ರಂದು ಪ್ರಾರಂಭವಾಗಿತ್ತು. ವೇಳಾಪಟ್ಟಿ ಪ್ರಕಾರ ಅಧಿವೇಶನವು ಏಪ್ರಿಲ್ 8ರಂದು ಮುಕ್ತಾಯಗೊಳ್ಳಬೇಕಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT