ಮಂಗಳವಾರ, ಅಕ್ಟೋಬರ್ 19, 2021
23 °C

2024ರಲ್ಲಿ ದಿಲ್ಲಿಯಲ್ಲಿ ಸರ್ಕಾರ ರಚಿಸುತ್ತೇವೆ: ಮಮತಾ ಸಹೋದರ ಕಾರ್ತಿಕ್‌

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

PTI

ಕೋಲ್ಕತ: ಪಶ್ಚಿಮ ಬಂಗಾಳದಲ್ಲಿ ಬೇರೆ ಯಾವುದೇ ಪಕ್ಷಕ್ಕೆ ನೆಲೆಯಿಲ್ಲ. ಪಕ್ಷ ಮತ್ತು ದೀದಿ ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ. 2024ರಲ್ಲಿ ದೆಹಲಿಯಲ್ಲಿ ನಾವು ಸರ್ಕಾರ ರಚಿಸುತ್ತೇವೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಹೋದರ ಕಾರ್ತಿಕ್‌ ಬ್ಯಾನರ್ಜಿ ತಿಳಿಸಿದ್ದಾರೆ.

ಭವಾನಿಪುರ ಉಪಚುನಾವಣೆ ಫಲಿತಾಂಶ ಬಂದ ಬಳಿಕ ಪ್ರತಿಕ್ರಿಯಿಸಿರುವ ಕಾರ್ತಿಕ್‌, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ ಸರ್ಕಾರ ರಚಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿರುವುದಾಗಿ 'ಎಎನ್ಐ' ವರದಿ ಮಾಡಿದೆ.

ಭವಾನಿಪುರ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್‌ ವಿರುದ್ಧ 58 ಸಾವಿರ ಮತಗಳ ಅಂತರದಿಂದ ಜಯಗಳಿಸಿದರು. ಈ ಮೂಲಕ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಎದುರಾಗಿದ್ದ ತೊಡಕನ್ನು ನಿವಾರಿಸಿಕೊಂಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು