ಬುಧವಾರ, ಅಕ್ಟೋಬರ್ 21, 2020
21 °C

ಎಫ್‌ಸಿಆರ್‌ಎ: ತಿದ್ದುಪಡಿ ಮಸೂದೆ ಅಂಗೀಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ವಿದೇಶಿ ದೇಣಿಗೆ ಸ್ವೀಕರಿಸುವ ಸರ್ಕಾರೇತರ ಸಂಸ್ಥೆಯ ಪದಾಧಿಕಾರಿಗಳು, ನೋಂದಣಿಯ ಸಂದರ್ಭದಲ್ಲಿ ತಮ್ಮ ಆಧಾರ್‌ ಸಂಖ್ಯೆ ನೀಡುವುದನ್ನು ಕಡ್ಡಾಯಗೊಳಿಸುವ ವಿದೇಶಿ ದೇಣಿಗೆ (ತಿದ್ದುಪಡಿ) ಮಸೂದೆಯನ್ನು ಲೋಕಸಭೆಯಲ್ಲಿ ಸೋಮವಾರ ಅಂಗೀಕರಿಸಲಾಯಿತು.

ವಿರೋಧಪಕ್ಷಗಳ ಕೆಲವು ಸದಸ್ಯರು ವ್ಯಕ್ತಪಡಿಸಿದ ಕಳವಳಕ್ಕೆ ಸ್ಪಷ್ಟನೆ ನೀಡಿದ ಗೃಹಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್‌, ‘ಇದು ಯಾವುದೇ ಧರ್ಮ ಅಥವಾ ಎನ್‌ಜಿಒ ವಿರುದ್ಧದ ಮಸೂದೆಯಲ್ಲ. ವಿದೇಶಿ ದೇಣಿಗೆಯನ್ನು ದುರ್ಬಳಕೆ ಮಾಡುವುದನ್ನು ತಡೆಯಲು ಸಹಾಯಕವಾಗಲಿದೆ. ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಈ ಮಸೂದೆಯ ಅಗತ್ಯವಿದೆ’ ಎಂದರು.

‘ಈ ಮಸೂದೆಯ ಮೂಲಕ ಎನ್‌ಜಿಒಗಳ ಉಸಿರುಗಟ್ಟಿಸುವ ಯತ್ನ ಮಾಡಲಾಗುತ್ತಿದೆ’ ಎಂದು ಕಾಂಗ್ರೆಸ್‌ ಸಂಸದ ಆಂಟೊ ಆಂಟನಿ ಆರೋಪಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು