ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯನ್ನು ಸೋಲಿಸಲು ಸಮಾನ ಮನಸ್ಕ ಪಕ್ಷಗಳ ಜತೆ ಮೈತ್ರಿಗೆ ಸಿದ್ಧ: ಖರ್ಗೆ

Last Updated 25 ಫೆಬ್ರವರಿ 2023, 10:46 IST
ಅಕ್ಷರ ಗಾತ್ರ

ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಜನ ವಿರೋಧಿ ಬಿಜೆಪಿಯನ್ನು ಸೋಲಿಸಲು ಸಮಾನ ಮನಸ್ಕ ಪಕ್ಷಗಳ ಜತೆ ಪರ್ಯಾಯ ಮೈತ್ರಿಕೂಟವನ್ನು ರಚಿಸಲು ಪಕ್ಷ ಎದುರು ನೋಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್‌ನ 85ನೇ ಮಹಾಅಧಿವೇಶನದಲ್ಲಿ ಮಾತನಾಡಿದ ಅವರು, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಚೀನಾ ಗಡಿಯಲ್ಲಿ ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗಿದೆ. ಹಣದುಬ್ಬರ ಸಾರ್ವಕಾಲಿಕ ಉತ್ತುಂಗಕ್ಕೆ ಏರಿದ್ದು, ನಿರುದ್ಯೋಗ ದಾಖಲೆ ಮಟ್ಟಕ್ಕೆ ಜಿಗಿದಿದೆ ಎಂದು ಟೀಕಿಸಿದ್ದಾರೆ.

‘ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಕಾಂಗ್ರೆಸ್ ಮಾತ್ರ ದೇಶಕ್ಕೆ ಸಮರ್ಥ ಮತ್ತು ನಿರ್ಣಾಯಕ ನಾಯಕತ್ವ ನೀಡಲು ಸಾಧ್ಯ.’ಎಂದು ಅವರು ಹೇಳಿದ್ದಾರೆ.

2004ರಿಂದ 2014ರವರೆಗೆ ಸಮಾನ ಮನಸ್ಕ ಪಕ್ಷಗಳ ಜತೆ ಸೇರಿ ಕಾಂಗ್ರೆಸ್ ಪಕ್ಷ ಸರ್ಕಾರವನ್ನು ಮುನ್ನಡೆಸಿತ್ತು.

‘ಈಗ ಮತ್ತೊಮ್ಮೆ ನಾವು, ಜನ ವಿರೋಧಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಬಿಜೆಪಿಯನ್ನು ಸೋಲಿಸಲು ಸಮಾನ ಮನಸ್ಕ ಪಕ್ಷಗಳ ಒಕ್ಕೂಟ ರಚನೆಗೆ ಎದುರು ನೋಡುತ್ತಿದ್ದೇವೆ’ಎಂದು ಖರ್ಗೆ ಹೇಳಿದ್ದಾರೆ.

ದೆಹಲಿಯಲ್ಲಿ ಅಧಿಕಾರ ನಡೆಸುತ್ತಿರುವವರ ಡಿಎನ್‌ಎ ಬಡವರ ವಿರೋಧಿಯಾಗಿದೆ. ಅವರು ಪ್ರಜಾಪ್ರಭುತ್ವವನ್ನು ನಾಶ ಮಾಡಲು ಯತ್ನಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ತಮ್ಮನ್ನು ತಾವು ‘ಪ್ರಧಾನ ಸೇವಕ’ಎಂದು ಹೇಳಿಕೊಳ್ಳುವ ಪ್ರಧಾನಿ ಮೋದಿ, ತಮ್ಮ ಸ್ನೇಹಿತರ ಹಿತಾಸಕ್ತಿ ರಕ್ಷಣೆಗಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವವನ್ನು ನಾಶಮಾಡುವ ಸಂಚು ನಡೆಯುತ್ತಿದೆ. ಆದರೆ, ಕಾಂಗ್ರೆಸ್, ಎಲ್ಲರನ್ನೂ ಒಗ್ಗೂಡಿಸಲು ಯತ್ನಿಸುತ್ತಿದೆ ಎಂದು ಖರ್ಗೆ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT