ಮಂಗಳವಾರ, ಜನವರಿ 18, 2022
15 °C

ಎಸ್‌ಪಿ ಸರ್ಕಾರ ಬರುವುದಾಗಿ ಶ್ರೀಕೃಷ್ಣ ಕನಸಿನಲ್ಲಿ ಬಂದು ಹೇಳಿದ್ದಾನೆ: ಅಖಿಲೇಶ್‌

ಪಿಟಿಐ Updated:

ಅಕ್ಷರ ಗಾತ್ರ : | |

ಲಖನೌ: ವಿಧಾನಸಭೆ ಚುನಾವಣೆ ನಂತರ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಸರ್ಕಾರ ರಚಿಸುವುದಾಗಿಯೂ, ನಂತರ ರಾಮ ರಾಜ್ಯ ಸ್ಥಾಪನೆಯಾಗುವುದಾಗಿಯೂ ಪ್ರತಿದಿನ ಶ್ರೀಕೃಷ್ಣ ಕನಸಿನಲ್ಲಿ ಬಂದು ಹೇಳುತ್ತಿದ್ದಾನೆ ಎಂದು ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಹೇಳಿದ್ದಾರೆ.

ಬಿಜೆಪಿಯ ಬಹ್ರೈಚ್ ಶಾಸಕಿ ಮಾಧುರಿ ವರ್ಮಾ ಅವರ ಸೇರ್ಪಡೆ ಸಮಾರಂಭದಲ್ಲಿ ಮಾತನಾಡಿರುವ ಅಖಿಲೇಶ್‌ ಯಾದವ್‌, ಶ್ರೀಕೃಷ್ಣ ಕನಸಿನಲ್ಲಿ ಬರುತ್ತಿರುವುದಾಗಿ ಹಾಸ್ಯಭರಿತವಾಗಿ, ಲಘುಬಗೆಯಲ್ಲಿ ಹೇಳಿದರು.

ಬಹ್ರೈಚ್‌ ಜಿಲ್ಲೆಯ ನಾನ್ಪಾರ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಿಜೆಪಿಯ ಮಾಧುರಿ ವರ್ಮಾ ಸೋಮವಾರ ಎಸ್‌ಪಿ ಸೇರ್ಪಡೆಯಾದರು. ಮಾಧುರಿ ಸೇರ್ಪಡೆಯ ಬಗ್ಗೆ ಹರ್ಷ ವ್ಯಕ್ತಪಡಿಸಿದ ಯಾದವ್ ಅವರು, ಉತ್ತರ ಪ್ರದೇಶದಲ್ಲಿ ಎಸ್‌ಪಿ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದರು.

'ರಾಮರಾಜ್ಯಕ್ಕೆ ಸಮಾಜವಾದವು ಮಾರ್ಗವಾಗಿದೆ. 'ಸಮಾಜವಾದ' ಸ್ಥಾಪನೆಯಾದ ದಿನ, ರಾಜ್ಯದಲ್ಲಿ ರಾಮ ರಾಜ್ಯ ಸ್ಥಾಪನೆಯಾಗುತ್ತದೆ. ಉತ್ತರ ಪ್ರದೇಶದಲ್ಲಿ ನಮ್ಮ ಸರ್ಕಾರ ಬರಲಿದೆ ಎಂದು ಹೇಳಲು ಶ್ರೀಕೃಷ್ಣ ಪ್ರತಿ ರಾತ್ರಿ ನನ್ನ ಕನಸಿನಲ್ಲಿ ಬರುತ್ತಾನೆ,' ಎಂದು ಅಖಿಲೇಶ್‌ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು