ಶನಿವಾರ, ಏಪ್ರಿಲ್ 1, 2023
25 °C

ಪುಣೆ-ಬೆಂಗಳೂರು ರಸ್ತೆಯಲ್ಲಿ ಲಾರಿ–ಕಂಟೇನರ್ ಡಿಕ್ಕಿ: ಇಬ್ಬರು ಚಾಲಕರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಬೆಳಗಾವಿ: ತಾಲ್ಲೂಕಿನ ವಂಟಮೂರಿ ಘಾಟ್‌ನಲ್ಲಿ ಪುಣೆ–ಬೆಂಗಳೂರು ರಸ್ತೆಯಲ್ಲಿ ಕಂಟೇನರ್‌ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರೂ ಚಾಲಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಂಗಳವಾರ ಬೆಳಗಿನ ಜಾವ ಒಂದು ಗಂಟೆ ಸುಮಾರಿಗೆ ನಡೆದಿದೆ.

ಮೃತರನ್ನು ಉತ್ತರಪ್ರದೇಶದ ನೀರಜ ಬಲ್ಲೂರ ಹಾಗೂ ಟ್ರಕ್‌ ಚಾಲಕ ಮಹಾರಾಷ್ಟ್ರದ ರಾಜೇಂದ್ರ ದೋಯಿಪಡೆ ಎಂದು ಗುರುತಿಸಲಾಗಿದೆ.

ಶಿಗ್ಗಾವಿ ಕಡೆಯಿಂದ ಮಹಾರಾಷ್ಟ್ರಕ್ಕೆ ಮೆಕ್ಕೆಜೋಳದ ಹಿಟ್ಟಿನ ಚೀಲಗಳನ್ನು ತುಂಬಿಕೊಂಡು ಹೋಗುತ್ತಿದ್ದ ಕಂಟೇನರ್ ರಾಷ್ಟ್ರೀಯ ಹೆದ್ದಾರಿ-4ರ ಸುತಗಟ್ಟಿ ಇಳಿಜಾರು ಪ್ರದೇಶದಲ್ಲಿ ವಿಭಜಕವನ್ನು ಹಾರಿ ಮಹಾರಾಷ್ಟ್ರ ಕಡೆಯಿಂದ ಬೆಳಗಾವಿಗೆ ಈರುಳ್ಳಿ ಚೀಲಗಳನ್ನು ತರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕಂಟೇನರ್‌ನ ಮೇಲ್ಭಾಗ ಕಿತ್ತು ಬಂದಿದೆ. ಚೀಲಗಳಲ್ಲಿದ್ದ ಈರುಳ್ಳಿ ರಸ್ತೆಯ ತುಂಬೆಲ್ಲಾ ಚೆಲ್ಲಾಡಿದ್ದವು.

ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು