ನವದೆಹಲಿ: ‘ದ್ವೇಷ ಮತ್ತು ವಿಭಜನೆಯ ರಾಜಕಾರಣದಿಂದ ನನ್ನ ತಂದೆಯನ್ನು (ರಾಜೀವ್ ಗಾಂಧಿ) ಕಳೆದುಕೊಂಡಿದ್ದೇನೆ. ಆದರೆ, ಅದಕ್ಕಾಗಿ ನನ್ನ ಪ್ರೀತಿಯ ದೇಶವನ್ನು ಕಳೆದುಕೊಳ್ಳಲು ನಾನು ಬಯಸುವುದಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಹಮ್ಮಿಕೊಂಡಿರುವ ‘ಭಾರತ್ ಜೋಡೊ ಯಾತ್ರೆ’ಗೆ ಬುಧವಾರ ಚಾಲನೆ ನೀಡುವ ಮುನ್ನ ರಾಹುಲ್ ಗಾಂಧಿ, ತಮಿಳುನಾಡಿನ ಶ್ರೀಪೆರಂಬೂದೂರಿನಲ್ಲಿರುವ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಕುರಿತು ವಿಡಿಯೊ ಮತ್ತು ಫೋಟೊಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅವರು, ‘ಪ್ರೀತಿ ದ್ವೇಷವನ್ನು ಜಯಿಸುತ್ತದೆ. ಭರವಸೆ ಭಯವನ್ನು ಸೋಲಿಸುತ್ತದೆ. ಒಟ್ಟಾಗಿ ನಾವು ಜಯ ಸಾಧಿಸುತ್ತೇವೆ’ ಎಂದು ಹೇಳಿದ್ದಾರೆ.

3,570 ಕಿ.ಮೀ. ಸಂಚರಿಸಲಿರುವ ‘ಭಾರತ್ ಜೋಡೊ’ ಯಾತ್ರೆಯು ಆರ್ಥಿಕ ಅಸಮಾನತೆ, ಸಾಮಾಜಿಕ ಧ್ರುವೀಕರಣ, ರಾಜಕೀಯ ಕೇಂದ್ರೀಕರಣ ಸೇರಿದಂತೆ ದೇಶವನ್ನು ಬಾಧಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ ಎಂದು ಪಕ್ಷ ಹೇಳಿದೆ.

ರಾಹುಲ್ ಗಾಂಧಿ ಅವರಿಗೆ ಹಲವು ರಾಜ್ಯಗಳ ಕಾಂಗ್ರೆಸ್ ನಾಯಕರು ಸಾಥ್ ನೀಡಿದ್ದರು.

ಓದಿ...

ಯಾತ್ರೆಯಿಂದ ಭಾರತ ಜೋಡೊ, ಕಾಂಗ್ರೆಸ್ ಜೋಡೊ ಸಾಧ್ಯವಾಗಲಿದೆ: ಶಶಿ ತರೂರ್

ಧರ್ಮಗಳ ನಡುವಿನ ದ್ವೇಷ ಅಂತರ್ಯುದ್ಧಕ್ಕೆ ಕಾರಣವಾಗಬಹುದು: ಅಶೋಕ್ ಗೆಹಲೋತ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.