ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸೀದಿಗಳಿಂದ 'ಸುಪ್ರೀಂ' ಆದೇಶ ಉಲ್ಲಂಘನೆ; ಹೋರಾಟ ಮುಂದುವರಿಯಲಿದೆ: ರಾಜ್ ಠಾಕ್ರೆ

ಅಕ್ಷರ ಗಾತ್ರ

ಮುಂಬೈ: ಧ್ವನಿವರ್ಧಕ ವಿವಾದದಲ್ಲಿ ಪಕ್ಷ ಮತ್ತು ಕಾರ್ಯಕರ್ತರನ್ನು ರಾಜ್ಯ ಸರ್ಕಾರವು ಗುರಿಯಾಗಿಸಿದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್‌ ಠಾಕ್ರೆ ಹೇಳಿದ್ದಾರೆ.

'ರಾಜ್ಯದ ಹಲವು ಭಾಗಗಳಿಂದ ನನಗೆ ಕರೆಗಳು ಬರುತ್ತಿವೆ. ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ನಮಗೇಕೆ ಈ ರೀತಿ ಮಾಡಲಾಗುತ್ತಿದೆ? ಯಾರು ನಿಯಮಗಳನ್ನು ಪಾಲಿಸುತ್ತಿರುವರೋ ಅವರೇ ಕ್ರಮಗಳನ್ನು ಎದುರಿಸುತ್ತಿದ್ದಾರೆ' ಎಂದಿದ್ದಾರೆ.

ಮಸೀದಿಗಳ ಮೇಲಿರುವ ಧ್ವನಿವರ್ಧಕಗಳನ್ನು ತೆಗೆಯುವಂತೆ ಆಗ್ರಹಿಸಿದ್ದ ರಾಜ್‌ ಠಾಕ್ರೆ, ಅದಕ್ಕೆ ಮೇ 3ರ ಗಡುವು ಪ್ರಕಟಿಸಿದ್ದರು. ಅದು ಸಾಧ್ಯವಾಗದಿದ್ದರೆ, ಮಸೀದಿಗಳ ಎದುರು ಹನುಮಾನ್‌ ಚಾಲೀಸಾ ಪಠಣ ಆರಂಭಿಸುವುದಾಗಿ ಘೋಷಿಸಿದ್ದರು. ಅದರ ಬೆನ್ನಲ್ಲೇ ಮಹಾರಾಷ್ಟ್ರದಾದ್ಯಂತ ಪೊಲೀಸ್‌ ಭದ್ರತೆ ಹೆಚ್ಚಿಸಲಾಗಿದೆ.

ರಾಜ್ಯದ ಗೃಹ ಇಲಾಖೆ ಮೂಲಗಳ ಪ್ರಕಾರ, ಮುಂಬೈನಲ್ಲಿ 1,140 ಮಸೀದಿಗಳಿದ್ದು ಅವುಗಳ ಪೈಕಿ 135 ಮಸೀದಿಗಳಲ್ಲಿ ಆಜಾನ್‌ಗಾಗಿ ಇಂದು ಧ್ವನಿವರ್ಧಕಗಳನ್ನು ಬಳಸಲಾಗಿದೆ. ಸುಪ್ರೀಂ ಕೋರ್ಟ್‌ ಆದೇಶದ ಉಲ್ಲಂಘನೆಯಾಗಿರುವುದು ಪತ್ತೆಯಾದರೆ, ಆ ಮಸೀದಿಗಳ ವಿರುದ್ಧ ಪೊಲೀಸರು ಕ್ರಮಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿರುವುದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಸಿಆರ್‌ಪಿಸಿ ಸೆಕ್ಷನ್‌ 149ರ ಅಡಿಯಲ್ಲಿ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಸುಮಾರು 18,000 ನಾಯಕರು ಮತ್ತು ಕಾರ್ಯಕರ್ತರಿಗೆ ನೋಟಿಸ್‌ ನೀಡಲಾಗಿದೆ.

ಮುಂಬೈನಲ್ಲಿ 135 ಮಸೀದಿಗಳು ಸುಪ್ರೀಂ ಕೋರ್ಟ್‌ ಆದೇಶವನ್ನು ಉಲ್ಲಂಘಿಸಿವೆ. ಅದರ ಬಗ್ಗೆ ಏನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನು ತಿಳಿಯಬೇಕಿದೆ ಎಂದು ರಾಜ್‌ ಠಾಕ್ರೆ ಹೇಳಿದ್ದಾರೆ.

'ಧ್ವನಿವರ್ಧಕಗಳು ಧಾರ್ಮಿಕವಾದುದಲ್ಲ. ಇಲ್ಲಿನ ವಿಚಾರ ಸಾಮಾಜಿಕವಾದುದು. ನಾನು ಆಜಾನ್‌ ವಿರುದ್ಧ ಇಲ್ಲ; ಧ್ವನಿವರ್ಧಕಗಳ ಬಳಕೆಯ ವಿರುದ್ಧ ಇದ್ದೇನೆ' ಎಂದು ಹೇಳಿದ್ದಾರೆ.

ಮಸೀದಿ ಮತ್ತು ದೇವಾಲಯಗಳಲ್ಲಿ ಧ್ವನಿವರ್ಧಕಗಳ ಬಳಕೆಯ ವಿರುದ್ಧ ನಮ್ಮ ಶಾಂತಿಯುತ ಪ್ರತಿಭಟನೆ ಮುಂದುವರಿಯಲಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT