ಗುರುವಾರ , ಮೇ 19, 2022
19 °C

ಉತ್ತರ ಪ್ರದೇಶ: ಧಾರ್ಮಿಕ ಸ್ಥಳಗಳಿಂದ ಈವರೆಗೆ ತೆರವು ಮಾಡಿದ ಧ್ವನಿವರ್ಧಕಗಳೆಷ್ಟು?

ಐಎಎನ್‌ಎಸ್ Updated:

ಅಕ್ಷರ ಗಾತ್ರ : | |

ಲಖನೌ: ಉತ್ತರ ಪ್ರದೇಶದಲ್ಲಿ ಧ್ವನಿವರ್ಧಕಗಳ ತೆರವು ಕಾರ್ಯಾಚರಣೆ ಮುಂದುವರಿದಿದೆ. ಯೋಗಿ ಆದಿತ್ಯನಾಥ ಸರ್ಕಾರವು ಅನೇಕ ಧಾರ್ಮಿಕ ಸ್ಥಳಗಳಿಂದ ಈವರೆಗೆ 53,942 ಧ್ವನಿವರ್ಧಕಗಳನ್ನು ತೆರವು ಮಾಡಿದೆ.

‘ಭಾನುವಾರ ಬೆಳಿಗ್ಗೆ 7 ಗಂಟೆವರೆಗೆ ರಾಜ್ಯದ ವಿವಿಧ ಧಾರ್ಮಿಕ ಸ್ಥಳಗಳಿಂದ 53,942 ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ. 60,295 ಧ್ವನಿವರ್ಧಕಗಳ ಶಬ್ದ ಪ್ರಮಾಣವನ್ನು ಕಡಿಮೆ ಮಾಡಿಸಲಾಗಿದೆ’ ಎಂದು ಉತ್ತರ ಪ್ರದೇಶ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

ಧಾರ್ಮಿಕ ಸ್ಥಳಗಳಲ್ಲಿ ಅಕ್ರಮವಾಗಿ ಸ್ಥಾಪಿಸಿರುವ ಧ್ವನಿವರ್ಧಕಗಳನ್ನು ತೆರವುಗೊಳಿಸುವಂತೆ ಉತ್ತರ ಪ್ರದೇಶ ಸರ್ಕಾರ ಏಪ್ರಿಲ್ 24ರಂದು ಆದೇಶ ಹೊರಡಿಸಿತ್ತು.

‘ಧ್ವನಿವರ್ಧಕಗಳ ತೆರವು ವಿಚಾರವಾಗಿ ಜಿಲ್ಲಾಡಳಿತಗಳಿಂದ ಪಾಲನಾ ವರದಿ ಕೇಳಲಾಗಿದೆ. ಧಾರ್ಮಿಕ ನಾಯಕರ ಜತೆ ಮಾತುಕತೆ ನಡೆಸಿ ಅವರ ಸಹಕಾರದೊಂದಿಗೆ ಅಕ್ರಮ ಧ್ವನಿವರ್ಧಕಗಳನ್ನು ತೆರವು ಮಾಡುವಂತೆ ಪೊಲೀಸರಿಗೆ ಸೂಚಿಸಲಾಗಿದೆ’ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಅವನೀಶ್ ಕುಮಾರ್ ಅವಸ್ಥಿ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು