ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡಿಮೆ ವೆಚ್ಚದ ಚಾರ್ಜಿಂಗ್‌ ಕೇಂದ್ರಗಳ ಸ್ಥಾಪನೆ: ಕೇಂದ್ರ ಸರ್ಕಾರ

Last Updated 12 ಮೇ 2021, 15:30 IST
ಅಕ್ಷರ ಗಾತ್ರ

ನವದೆಹಲಿ: ಕಡಿಮೆ ವೆಚ್ಚದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜಿಂಗ್‌ ಮಾಡಿಕೊಳ್ಳಬಹುದಾದ ಕೇಂದ್ರಗಳನ್ನು ಶೀಘ್ರವೇ ಸ್ಥಾಪಿಸಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.

ಈ ಸೌಲಭ್ಯ ಕೈಗೆಟಕುವ ಬೆಲೆಯಲ್ಲಿ ಇರಲಿದೆ. ಇದರ ಜೊತೆಗೆ ದೇಶದಾದ್ಯಂತ ವಾಹನಗಳ ಚಾರ್ಜಿಂಗ್‌ಗೆ ಸಂಬಂಧಿಸಿದ ಮೂಲಸೌಕರ್ಯ ಹೆಚ್ಚಿಸಲಾಗುವುದು ಎಂದು ನೀತಿ ಆಯೋಗದ ಪ್ರಕಟಣೆ ತಿಳಿಸಿದೆ.

‘ಲೋ ಕಾಸ್ಟ್‌ ಎ.ಸಿ ಚಾರ್ಜ್‌ ಪಾಯಿಂಟ್‌’ (ಎಲ್‌ಎಸಿ) ನೆರವಿನಿಂದ 3 ಕಿಲೊವಾಟ್‌ ವರೆಗೆ ವಿದ್ಯುತ್‌ ಪೂರೈಕೆಯಾಗಲಿದ್ದು, ಎಲೆಕ್ಟ್ರಿಕ್‌ ಸ್ಕೂಟರ್‌ ಹಾಗೂ ಇ–ಆಟೊಗಳನ್ನು ಚಾರ್ಜ್ ಮಾಡಬಹುದು. ವಾಹನಗಳನ್ನು ಚಾರ್ಜ್ ಮಾಡಲು ಅಗತ್ಯವಿರುವ ಸಾಧನಗಳನ್ನು (ಚಾರ್ಜ್‌ ಪಾಯಿಂಟ್‌ ಡಿವೈಸ್‌) ಉತ್ಪಾದನೆಗೆ ಹಲವಾರು ಕಂಪನಿಗಳು ಆಸಕ್ತಿ ತೋರಿಸಿವೆ ಎಂದೂ ಪ್ರಕಟಣೆ ತಿಳಿಸಿದೆ.

‘ಪಾರ್ಕಿಂಗ್‌ ಸ್ಥಳಗಳು, ಮಾಲ್‌ಗಳು, ಕಚೇರಿ, ಆಸ್ಪತ್ರೆ, ಕಿರಾಣಿ ಅಂಗಡಿಗಳಲ್ಲಿ ಚಾರ್ಜ್‌ ಪಾಯಿಂಟ್‌ ಡಿವೈಸ್‌ ಬಳಸಿ ವಾಹನಗಳ ಚಾರ್ಜಿಂಗ್‌ ಸಾಧ್ಯವಾಗುವಂತೆ ಮಾಡುವ ಉದ್ದೇಶ ಹೊಂದಲಾಗಿದೆ’ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT