ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ಹೊಸ ಪ್ರಕರಣಗಳು ಇಳಿಕೆ; 571 ದಿನಗಳಲ್ಲೇ ಕಡಿಮೆ

Last Updated 14 ಡಿಸೆಂಬರ್ 2021, 6:46 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 5,784 ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 252 ಜನರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,47,03,644ಕ್ಕೆ ತಲುಪಿದ್ದು, 88,993 ಸಕ್ರಿಯ ಪ್ರಕರಣಗಳಿವೆ. ಈವರೆಗೂ 4,75,888 ಮಂದಿ ಸಾವಿಗೀಡಾಗಿದ್ದಾರೆ.

ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 7,995 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, ಒಟ್ಟಾರೆ 3,41,38,763 ಮಂದಿ ಈವರೆಗೆ ಗುಣಮುಖರಾಗಿದ್ದಾರೆ.

ಒಟ್ಟು ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇಕಡ 0.26 ರಷ್ಟಿದೆ ಹಾಗೂ ಕಳೆದ ಮಾರ್ಚ್‌ನಿಂದೀಚೆಗೆ ಗುಣಮುಖ ಪ್ರಮಾಣ ಶೇ 98.37ಕ್ಕೆ ಏರಿಕೆಯಾಗಿದೆ.

ಇದೇ ಅವಧಿಯಲ್ಲಿ ದೇಶದಾದ್ಯಂತ 9,50,482 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಒಟ್ಟಾರೆ 65.76 ಕೋಟಿಗೆ ಏರಿಕೆಯಾಗಿದೆ.

ದೇಶದಾದ್ಯಂತ 133.79 ಕೋಟಿಗೂ ಅಧಿಕ ಡೋಸ್‌ ಕೋವಿಡ್‌–19 ಲಸಿಕೆ ವಿತರಣೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT