ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಪಿಜಿ ಸಿಲಿಂಡರ್‌ ಸ್ಫೋಟ: ಇಬ್ಬರ ಸಾವು

Last Updated 23 ನವೆಂಬರ್ 2021, 9:30 IST
ಅಕ್ಷರ ಗಾತ್ರ

ಸೇಲಂ, ತಮಿಳುನಾಡು: ಜಿಲ್ಲೆಯ ಕರುಂಗಲ್‌ಪಟ್ಟಿಯಲ್ಲಿ ಮಂಗಳವಾರ ಅಡುಗೆ ಅನಿಲ ಸಿಲಿಂಡರ್‌ ಸ್ಫೋಟಗೊಂಡು ಕಟ್ಟಡ ಕುಸಿದ ಕಾರಣ ಇಬ್ಬರು ಮೃತಪಟ್ಟಿದ್ದಾರೆ.

ಅಕ್ಕಪಕ್ಕದ ಎರಡು ಮನೆಗಳೂ ಕುಸಿದಿದ್ದು 12 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಟ್ಟಡದ ಅವಶೇಷದಲ್ಲಿ ಸಿಲುಕಿದ್ದ 12 ಮಂದಿಯನ್ನು ರಕ್ಷಿಸಿದರು. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT