ಮಂಗಳವಾರ, ಮೇ 17, 2022
26 °C
ಲೆಫ್ಟಿನೆಂಟ್ ಜನರಲ್ ಎಸ್‌.ಕೆ.ಸೈನಿ ನಿವೃತ್ತಿ

ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಸಿ.ಪಿ. ಮೊಹಂತಿ ಅಧಿಕಾರ ಸ್ವೀಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭೂ ಸೇನಾ ವಿಭಾಗದ ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಚಂಡಿ ಪ್ರಸಾದ್ ಮೊಹಂತಿ (ಸಿ.ಪಿ. ಮೊಹಂತಿ) ಸೋಮವಾರ ಅಧಿಕಾರ ಸ್ವೀಕರಿಸಿದರು.

‌ಸೇನಾ ಸಿಬ್ಬಂದಿ ಉಪ ಮುಖ್ಯಸ್ಥರಾಗಿದ್ದ ಲೆಫ್ಟಿನೆಂಟ್ ಜನರಲ್‌ ಎಸ್‌.ಕೆ.ಸೈನಿ ಅವರು ಭಾನುವಾರ ನಿವೃತ್ತರಾದ ನಂತರ, ಅವರಿಂದ ತೆರವಾದ ಸ್ಥಾನಕ್ಕೆ ಮೊಹಂತಿ ಅವರನ್ನು ನೇಮಿಸಲಾಗಿದೆ.

ಮೊಹಂತಿ ಅವರು ತಮ್ಮ ನಾಲ್ಕು ದಶಕಗಳ ತಮ್ಮ ವೃತ್ತಿ ಜೀವನದಲ್ಲಿ ಹಲವು ಕ್ಷೇತ್ರಗಳಲ್ಲಿ, ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕಠಿಣ ಪರಿಸರದಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದ್ದಾರೆ. ಈಗ ಸೇನಾ ಸಿಬ್ಬಂದಿ ಉಪ ಮುಖ್ಯಸ್ಥರಾಗಿ ನೇಮಕವಾಗುವ ಮುನ್ನ ಸೇನೆಯ ಸದರನ್ ಕಮಾಂಡ್‌ನ ನಾಯಕರಾಗಿದ್ದರು.

ಡೆಹ್ರಾಡೂನ್‌ನ ಭಾರತೀಯ ಮಿಲಿಟರಿ ಕಾಲೇಜು ಮತ್ತು ಖಡಕ್ವಾಸ್ಲಾದ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಹಳೆಯ ವಿದ್ಯಾರ್ಥಿಯಾಗಿರುವ ಲೆಫ್ಟಿನೆಂಟ್ ಜನರಲ್ ಸಿಪಿ ಮೊಹಂತಿ ಅವರು,  ಜೂನ್ 12, 1982 ರಂದು ರಜಪೂತ ರೆಜಿಮೆಂಟ್‌ಗೆ ನಿಯೋಜನೆಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು