ಮಂಗಳವಾರ, ಸೆಪ್ಟೆಂಬರ್ 21, 2021
21 °C

ಉತ್ತರಾಖಂಡ ರಾಜ್ಯಪಾಲರಾಗಿ ಗುರುಮಿತ್ ಸಿಂಗ್ ಪ್ರಮಾಣ ವಚನ ಸ್ವೀಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ಡೆಹ್ರಾಡೂನ್‌: ಉತ್ತರಾಖಂಡ ರಾಜ್ಯಪಾಲರಾಗಿ ನಿವೃತ್ತ ಲೆಫ್ಟಿನೆಂಟ್ ಜನರಲ್‌ ಗುರುಮಿತ್‌ ಸಿಂಗ್‌ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ಇಲ್ಲಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಉತ್ತರಾಖಂಡ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆರ್‌. ಎಸ್. ಚೌಹಾಣ್ ಅವರು ಪ್ರಮಾಣ ವಚನ ಬೋಧಿಸಿದರು.

ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಗುರುಮಿತ್ ಸಿಂಗ್ ಅವರು ಸೇನೆಯಲ್ಲಿ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು. 

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಅವರ ಸಚಿವ ಸಂಪುಟ ಸಹೋದ್ಯೋಗಿಗಳು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್ ಎಸ್ ಸಂಧು ಮತ್ತು ಡಿಜಿಪಿ ಅಶೋಕ್ ಕುಮಾರ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ಮೊದಲಿನ ರಾಜ್ಯಪಾಲರಾಗಿದ್ದ ಬೇಬಿ ರಾಣಿ ಮೌರ್ಯ ಅವರು ಈಚೆಗೆ ರಾಜೀನಾಮೆ ನೀಡಿದ್ದರು. 

ಇದನ್ನೂ ಓದಿ... ಶ್ರೀನಗರ: ಇದೇ 26ರಂದು ದಾಲ್‌ ಸರೋವರದ ಮೇಲೆ ‘ಏರ್‌ ಶೋ’

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು