ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ನೇಮಕ

Last Updated 18 ಏಪ್ರಿಲ್ 2022, 13:13 IST
ಅಕ್ಷರ ಗಾತ್ರ

ನವದೆಹಲಿ:ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.

ಇದರೊಂದಿಗೆ, ಸೇನಾ ಮುಖ್ಯಸ್ಥರಾಗಿ ನೇಮಕಗೊಂಡ ಮೊದಲ ಎಂಜಿನಿಯರ್ ಎಂಬ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ ಎಂದು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಜನರಲ್‌ ಎಂ.ಎಂ.ನರವಣೆ ಅವರು ಮೂರೂ ಸೇನಾಪಡೆಗಳ ಸಿಬ್ಬಂದಿ ಸಮಿತಿಯ ಮುಖ್ಯಸ್ಥರಾಗಿ (ಸಿಒಎಸ್‌ಸಿ) ಡಿಸೆಂಬರ್‌ನಲ್ಲಿ ಜವಾಬ್ದಾರಿ ವಹಿಸಿಕೊಂಡಿದ್ದರು. ಹೀಗಾಗಿ ಸೇನಾ ಮುಖ್ಯಸ್ಥರಾಗಿ ಮನೋಜ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ.

ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್‌) ಬಿಪಿನ್‌ ರಾವತ್‌ ಹಾಗೂ ಅವರ ಕುಟುಂಬದವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ 2021ರ ಡಿಸೆಂಬರ್ 8ರಂದು ತಮಿಳುನಾಡಿನ ಕೂನೂರಿನಲ್ಲಿ ಪತನಗೊಂಡು ಅವರು ಮೃತಪಟ್ಟಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT