ಸೋಮವಾರ, ಡಿಸೆಂಬರ್ 5, 2022
22 °C

ಸೇನಾಪಡೆಗಳ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ನಾಳೆ ಅಧಿಕಾರ ಸ್ವೀಕಾರ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಸೇನಾ ಪಡೆಗಳ ಮುಖ್ಯಸ್ಥರ (ಸಿಡಿಎಸ್‌) ಹುದ್ದೆಗೆ ನೇಮಕಗೊಂಡಿರುವ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಅನಿಲ್ ಚೌಹಾಣ್ ಅವರು ಸೆ.30 (ಶುಕ್ರವಾರ) ಅಧಿಕಾರ ಸ್ವೀಕರಿಸಲಿದ್ದಾರೆ.

‘ಅನಿಲ್ ಚೌಹಾಣ್ ಅವರು ಅಧಿಕಾರ ವಹಿಸಿಕೊಂಡ ದಿನದಿಂದ ಕೇಂದ್ರದ ರಕ್ಷಣಾ ವ್ಯವಹಾರಗಳ ಇಲಾಖೆ ಕಾರ್ಯದರ್ಶಿಯಾಗಿಯೂ ಮುಂದಿನ ಆದೇಶದವರೆಗೆ ಕಾರ್ಯನಿರ್ವಹಿಸಲಿದ್ದಾರೆ’ ಎಂದು ರಕ್ಷಣಾ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಅನಿಲ್ ಅವರು ತಮ್ಮ ನಾಲ್ಕು ದಶಕಗಳ ವೃತ್ತಿ ಜೀವನದಲ್ಲಿ ಸೇನೆಯ ಹಲವು ಹುದ್ದೆಗಳನ್ನು ನಿಭಾಯಿಸಿದ್ದು, ಈಶಾನ್ಯ ಭಾರತ ಮತ್ತು ಜಮ್ಮು–ಕಾಶ್ಮೀರದಲ್ಲಿ ಉಗ್ರರ ನಿಗ್ರಹ ಕಾರ್ಯಾಚರಣೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ.

ಜನರಲ್ ಬಿಪಿನ್ ರಾವತ್ ಅವರ ದುರ್ಮರಣದಿಂದಾಗಿ ಒಂಬತ್ತು ತಿಂಗಳಿನಿಂದ ಸಿಡಿಎಸ್‌ ಹುದ್ದೆ ಖಾಲಿ ಇತ್ತು.

ಇವನ್ನೂ ಓದಿ...
ಬಿಪಿನ್‌ ರಾವತ್‌ಗೆ ಆರು ವರ್ಷದ ಹಿಂದೆ ಕೈಹಿಡಿದ ಅದೃಷ್ಟ ಈಗ ಒಲಿಯಲಿಲ್ಲ 
ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಎಂಐ–17ವಿ ಹೆಲಿಕಾಪ್ಟರ್ ಪತನ: 13 ಮಂದಿ ಸಾವು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು