ಥಾಣೆ(ಮಹಾರಾಷ್ಟ್ರ): ಉದ್ಯೋಗದ ಆಮಿಷ ನಂಬಿ, ಸೈಬರ್ ವಂಚನೆಗೊಳಗಾದ ಇಲ್ಲಿನ ಸಾಫ್ಟ್‌ವೇರ್ ಡೆವಲಪರ್ ಒಬ್ಬರು ₹3.49 ಲಕ್ಷ ಕಳೆದುಕೊಂಡಿದ್ದಾರೆ.
ಈ ಸಂಬಂಧ ಅಪರಿಚಿತ ವ್ಯಕ್ತಿಯ ವಿರುದ್ಧ ಶುಕ್ರವಾರ ಕಾಮೋಠೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸದ್ಯ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಸಂತ್ರಸ್ತ, ಫೆಬ್ರವರಿಯಲ್ಲಿ ಆರೋಪಿಗಳು ತಮಗೆ ಆನ್‌ಲೈನ್ ಮೂಲಕ ಪಾರ್ಟ್ ಟೈಮ್ ಕೆಲಸ ಮಾಡುವ ಆಮಿಷ ಒಡ್ಡಿದ್ದರು. ಆರಂಭದಲ್ಲಿ ಕೆಲವು ಯುಟ್ಯೂಬ್ ಚಾನೆಲ್‌ಗಳನ್ನು ಸಬ್‌ಸ್ಕ್ರೈಬ್ ಮಾಡುವಂತೆ ಮತ್ತು ಕ್ರಿಪ್ಟೋಕರೆನ್ಸಿಯಲ್ಲಿ ಹೂಡಿಕೆ ಮಾಡುವಂತೆ ತಿಳಿಸಲಾಗಿತ್ತು ಎಂದು ಉಲ್ಲೇಖಿಸಿ ದೂರು ನೀಡಿದ್ದಾರೆ.
ಈ ಬಗ್ಗೆ ತಿಳಿಸಿರುವ ಪೊಲೀಸರು, ಯುಟ್ಯೂಬ್ ಚಾನೆಲ್‌ಗಳನ್ನು ಸಬ್‌ಸ್ಕ್ರೈಬ್ ಮತ್ತು ಕ್ರಿಪ್ಟೋಕರೆನ್ಸಿಯಲ್ಲಿ ಹೂಡಿಕೆ ಮಾಡಿದ್ದರಿಂದ ಆರಂಭದಲ್ಲಿ ಸಂತ್ರಸ್ತನಿಗೆ ಸ್ವಲ್ಪ ಆದಾಯ ಬಂದಿದೆ. ಕೆಲ ದಿನಗಳಲ್ಲೇ ಹಣ ಬರುವುದು ನಿಂತಿದೆ. ಸ್ವಲ್ಪ ಸಮಯದ ನಂತರ ತಾನು ಮೋಸ ಹೋಗಿರುವುದನ್ನು ಅರಿತ ಸಂತ್ರಸ್ತ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.