ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯ ಪ್ರದೇಶ: ಬಾಂಗ್ಲಾದ ಜೆಎಂಬಿ ಸಂಘಟನೆಯ ನಾಲ್ವರು ಶಂಕಿತ ಉಗ್ರರ ಬಂಧನ

Last Updated 13 ಮಾರ್ಚ್ 2022, 16:05 IST
ಅಕ್ಷರ ಗಾತ್ರ

ಭೋಪಾಲ: ಮಧ್ಯ ಪ್ರದೇಶದ ರಾಜಧಾನಿ ಭೋಪಾಲದಲ್ಲಿ ಬಾಂಗ್ಲಾದೇಶ ಮೂಲದ ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (ಜೆಎಂಬಿ) ಉಗ್ರ ಸಂಘಟನೆಗೆ ಸೇರಿದ ನಾಲ್ವರು ಶಂಕಿತ ಉಗ್ರರನ್ನು ಭಾನುವಾರ ಬಂಧಿಸಲಾಗಿದೆ.

ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ ಮಿಶ್ರಾ ಈ ಕುರಿತು ಮಾಹಿತಿ ನೀಡಿದ್ದಾರೆ.

ಭಯೋತ್ಪಾದಕರಿಂದ ಜಿಹಾದಿ ಸಾಹಿತ್ಯ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಿಹಾರದ ಬೋಧಗಯಾ ಸ್ಫೋಟದಲ್ಲಿ ಭಾಗಿಯಾಗಿದ್ದ ಜೆಎಂಬಿ ಸಂಘಟನೆಯ ಮೇಲೆ 2019ರಲ್ಲಿ ಭಾರತ ನಿಷೇಧ ಹೇರಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT