ಭೋಪಾಲ್: ಉತ್ತರ ಪ್ರದೇಶದ ಹಾಥರಸ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಬೆನ್ನಲೇ ಬಿಜೆಪಿ ಆಡಳಿತ ಇರುವ ಮಧ್ಯಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರದ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದ್ದು ಸಂತ್ರಸ್ತ ಮಹಿಳೆ (32)ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮಧ್ಯಪ್ರದೇಶದ ನರಸಿಂಗಪುರ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರ ಘಟನೆ ವರದಿಯಾಗಿದೆ.

ಸಂತ್ರಸ್ತ ದಲಿತ ಮಹಿಳೆಸೆಪ್ಟೆಂಬರ್ 28ರಂದು ಸ್ಥಳೀಯ ಪೋಲಿಸ್ ಠಾಣೆಗೆ ಆಗಮಿಸಿ ನನ್ನ ಮೇಲೆ ಮೂವರ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. ಆದರೆ ಸ್ಥಳೀಯ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿರಲಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಆಕ್ಟೋಬರ್ 2ರಂದು ಸಂತ್ರಸ್ತೆನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದು ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನರಸಿಂಗಪುರ ಅತ್ಯಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತನಿಖೆಗೆ ಆದೇಶಿಸಿದ್ದಾರೆ. ನಿರ್ಲಕ್ಷ್ಯ ತೋರಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.