ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಪಕ್ಷವು ʼಸರ್ಕಸ್ʼ ಆಗಿ ಬದಲಾಗಿದೆ: ಮಧ್ಯಪ್ರದೇಶ ಸಿಎಂ ಚೌಹಾಣ್

Last Updated 17 ಅಕ್ಟೋಬರ್ 2021, 3:37 IST
ಅಕ್ಷರ ಗಾತ್ರ

ಬರ್ಹಾನ್‌ಪುರ: ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್‌ ಪಕ್ಷಎದುರಿಸುತ್ತಿರುವ ಆಂತರಿಕ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌, ಆ ಪಕ್ಷವು ಸರ್ಕಸ್‌ ಆಗಿ ಬದಲಾಗಿದೆ ಎಂದು ಲೇವಡಿ ಮಾಡಿದ್ದಾರೆ.

ನಗರದಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಚೌಹಾಣ್‌, ರಾಹುಲ್‌ ಗಾಂಧಿಯೇ ಕಾಂಗ್ರೆಸ್‌ ಅಲ್ಲ. ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. ಆದರೆ, ರಾಜ್ಯಗಳಲ್ಲಿನ ಮುಖ್ಯಮಂತ್ರಿಗಳನ್ನು ಕೆಳಗಿಳಿಸುವ ಸಂಪೂರ್ಣ ಹಕ್ಕು ರಾಹುಲ್‌ ಗಾಂಧಿಗೆ ಇದೆʼ ಎಂದು ಕುಟುಕಿದ್ದಾರೆ.

ಪಂಜಾಬ್‌ ಕಾಂಗ್ರೆಸ್‌ ಬಿಕ್ಕಟ್ಟು ಮತ್ತು ಅಮರೀಂದರ್‌ ಸಿಂಗ್‌ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರ ಬಗ್ಗೆ ಅಚ್ಚರಿ ವ್ಯಕ್ತಪಡಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ, ʼಸಿಂಗ್ ಅವರು ಪಂಜಾಬ್‌ ಮುಖ್ಯಮಂತ್ರಿಯಾಗಿ ಸರ್ಕಾರವನ್ನು ಸರಾಗವಾಗಿ ಮುನ್ನಡೆಸುತ್ತಿದ್ದರು. ಆದರೆ, ಅವರನ್ನು ಕೆಳಗಿಳಿಸಿ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರನ್ನು ಸಿಎಂ ಮಾಡಲಾಗಿದೆʼ ಎಂದು ದೂರಿದ್ದಾರೆ.ನವಜೋತ್‌ ಸಿಂಗ್‌ ಸಿಧು ಪಂಜಾಬ್‌ ಕಾಂಗ್ರೆಸ್‌ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪಕ್ಷವನ್ನು ಈಸ್ಥಿತಿಗೆ ದೂಡಿದರು ಎಂದೂ ಆರೋಪಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರವಿರುವರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಮತ್ತು ಪ್ರಮುಖ ನಾಯಕಸಚಿನ್‌ ಪೈಲಟ್‌ ಸಂಬಂಧ ಹಳಸಿದೆ.ಛತ್ತೀಸಗಡದಲ್ಲಿಯೂ ಇದೇ ಪರಿಸ್ಥಿತಿ ಇದೆ ಎಂದು ತಿವಿದಿದ್ದಾರೆ.

ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್‌ ವಿರುದ್ಧವೂವಾಗ್ದಾಳಿ ನಡೆಸಿರುವ ಚೌಹಾಣ್‌, ಕಾಂಗ್ರೆಸ್‌ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಯಸಿದರೆ, ಕಮಲ್ ನಾಥ್‌ರನ್ನೇ ನೇಮಿಸುತ್ತದೆ. ತಾರಾ ಪ್ರಚಾರಕರ ವಿಚಾರ ಬಂದರೆ ಮತ್ತೆ ಕಮಲ್ ನಾ‌ಥ್‌ರನ್ನೇ ಅವಲಂಬಿಸುತ್ತದೆ. ಪಕ್ಷದ ಯುವಘಟಕಕ್ಕೂ ಕಮಲ್ ನಾಥ್‌ ಮಗ ನಕುಲ್‌ ನಾಥ್‌ ಅವರನ್ನೇ ನೇಮಿಸುತ್ತದೆʼ ಎಂದು ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT