ಶುಕ್ರವಾರ, ಮೇ 14, 2021
32 °C

ಮಧ್ಯಪ್ರದೇಶ: ದಮೋಹ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಮುನ್ನಡೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ದಮೋಹ್‌(ಮಧ್ಯಪ್ರದೇಶ): ಮಧ್ಯಪ್ರದೇಶದ ದಮೋಹ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಜಯ್‌ ಟಂಡನ್‌ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ರಾಹುಲ್ ಸಿಂಗ್ ಲೋಧಿ ಅವರಿಗಿಂತ 700 ಮತಗಳಷ್ಟು ಮುಂದಿದ್ದಾರೆ.

ರಾಹುಲ್ ಲೋಧಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ ಹಿನ್ನೆಲೆಯಲ್ಲಿ, ತೆರವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆ ನಡೆದಿತ್ತು.

ಇಲ್ಲಿವರೆಗಿನ ಮಾಹಿತಿ ಪ್ರಕಾರ ಕಾಂಗ್ರೆಸ್‌ನ ಅಜಯ್ ಟಂಡನ್ ಅವರು 2823 ಮತಗಳನ್ನು ಪಡೆದಿದ್ದು, ಬಿಜೆಪಿಯ ಲೋಧಿ 2123 ಮತಗಳನ್ನು ಪಡೆದಿದ್ದಾರೆ. ಈ ಕ್ಷೇತ್ರದಲ್ಲಿ ಶೇ 60ರಷ್ಟು ಮತದಾನವಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು