ಸೋಮವಾರ, ಜೂನ್ 21, 2021
21 °C

ಕಪ್ಪು ಶಿಲೀಂಧ್ರ ‘ಸಾಂಕ್ರಾಮಿಕ ರೋಗ’: ಮಧ್ಯಪ್ರದೇಶ ಘೋಷಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಭೋಪಾಲ್‌: ಕಪ್ಪು ಶಿಲೀಂಧ್ರ ಸೋಂಕನ್ನು (ಬ್ಲ್ಯಾಕ್‌ ಫಂಗಸ್‌) ‘ಸಾಂಕ್ರಾಮಿಕ ರೋಗ’ ಎಂದು ಮಧ್ಯಪ್ರದೇಶ ಸರ್ಕಾರ ಘೋಷಿಸಿದೆ.

ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಆರೋಗ್ಯ ಇಲಾಖೆಯು ಈ ಕುರಿತು ಅಧಿಸೂಚನೆ ಹೊರಡಿಸಿದೆ.

‘ಕಪ್ಪು ಶಿಲೀಂಧ್ರ ಸೋಂಕಿನ ಚಿಕಿತ್ಸೆಗೆ ಅಗತ್ಯವಿರುವ ‘ಎಂಪೊಟೆರೆಸಿನ್‌ ಬಿ’ ಔಷಧಿಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು’ ಎಂದು ಚೌಹಾಣ್‌ ಅವರು ಈ ಸಂಬಂಧ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

‘ರಾಜ್ಯದಲ್ಲಿ ಕಪ್ಪು ಶಿಲೀಂಧ್ರ ಸೋಂಕಿನಿಂದಾಗಿ ನಾಲ್ಕು ಮಂದಿ ಮೃತಪಟ್ಟಿದ್ದು, ಈ ಸೋಂಕು ದಮೊಹ್‌ ಮತ್ತು ಬಾಲಘಾಟ್‌ ಜಿಲ್ಲೆಯ ಕೋವಿಡ್‌ ರೋಗಿಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು