ಶುಕ್ರವಾರ, ಡಿಸೆಂಬರ್ 4, 2020
25 °C

ಜಾನುವಾರು ರಕ್ಷಣೆಗಾಗಿ ‘ಗೋವು ಸಚಿವಾಲಯ’ ರಚಿಸಲು ಮಧ್ಯಪ್ರದೇಶ ಸರ್ಕಾರ ನಿರ್ಧಾರ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಭೋಪಾಲ್‌: ರಾಜ್ಯದಲ್ಲಿ ಜಾನುವಾರು ರಕ್ಷಣೆಗೆ ‘ಗೋವು ಸಚಿವಾಲಯ’ ರಚಿಸಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ.

ಪಶುಸಂಗೋಪನೆ, ಅರಣ್ಯ, ಪಂಚಾಯತ್‌, ಗ್ರಾಮೀಣಾಭಿವೃದ್ಧಿ, ಗೃಹ ಮತ್ತು ರೈತ ಕಲ್ಯಾಣ ಇಲಾಖೆಗಳು ‘ಗೋವು ಸಚಿವಾಲಯ’ದ ಒಂದು ಭಾಗವಾಗಲಿವೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಈ ಕುರಿತು ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌, ‘ರಾಜ್ಯದಲ್ಲಿ ಜಾನುವಾರುಗಳ ರಕ್ಷಣೆಗೆ ‘ಸಚಿವಾಲಯ’ ಸ್ಥಾಪಿಸಲು ನಿರ್ಧರಿಸಲಾಗಿದೆ. ಪಶುಪಾಲನೆ, ಅರಣ್ಯ, ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ, ಕಂದಾಯ, ಗೃಹ ಮತ್ತು ರೈತರ ಕಲ್ಯಾಣ ಇಲಾಖೆಯನ್ನು ಗೋವು ಸಚಿವಾಲಯದಲ್ಲಿ ಸೇರಿಸಲಾಗುವುದು’ ಎಂದು ಬರೆದುಕೊಂಡಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು