ಸೋಮವಾರ, ಸೆಪ್ಟೆಂಬರ್ 27, 2021
22 °C

ಪಿಎಂಜಿಕೆವೈ ಅಡಿಯಲ್ಲಿ 4.9 ಕೋಟಿ ಜನರಿಗೆ ಉಚಿತ ಅಕ್ಕಿ: ಮಧ್ಯಪ್ರದೇಶ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಭೋಪಾಲ್:‌ ಮಧ್ಯಪ್ರದೇಶ ಸರ್ಕಾರವು ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯ (ಪಿಎಂಜಿಕೆವೈ) ಅಡಿಯಲ್ಲಿ ರಾಜ್ಯದಾದ್ಯಂತ 4.9 ಕೋಟಿ ಬಡವರಿಗೆ ಉಚಿತ ಅಕ್ಕಿ ವಿತರಿಸುವ ಕಾರ್ಯಕ್ರಮವನ್ನು ಶನಿವಾರ ಏರ್ಪಡಿಸಿದೆ.

ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಪಿಎಂಜಿಕೆವೈ ಕಾರ್ಯಕ್ರಮದ ವೇಳೆ ರಾಜ್ಯದ ಪ್ರವಾಹ ಸ್ಥಿತಿಯ ಬಗ್ಗೆಯೂ ಮಾತನಾಡಿದರು. ಪಿಎಂಜಿಕೆವೈ ಅಡಿಯಲ್ಲಿ ವಿತರಿಸುವ ಪಡಿತರ ಮಾತ್ರವಲ್ಲದೆ, ಪ್ರವಾಹ ಸಂತ್ರಸ್ತ ಕುಟುಂಬಗಳಿಗೆ ತಲಾ 50 ಕೆಜಿ ಆಹಾರ ಪದಾರ್ಥಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ʼಸರ್ಕಾರವು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದ 46,000 ಜನರನ್ನು ರಕ್ಷಿಸಿದ್ದು, 20,000 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದೆʼ ಎಂದು ಸಿಎಂ ಮಾಹಿತಿ ನೀಡಿದರು.

ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಅವಾಸ್‌ ಯೋಜನೆ (ಪಿಎಂಎವೈ) ಅಡಿಯಲ್ಲಿ ಹಣಕಾಸಿನ ನೆರವು ನೀಡಲಾಗುವುದು. ಇದಲ್ಲದೆ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರಿಗೆ ಪಿಎಂಎವೈ ಅಡಿಯಲ್ಲಿ 6,000 ರೂಪಾಯಿಗಳ ಹಣಕಾಸಿನ ನೆರವು ನೀಡುತ್ತೇವೆʼ ಎಂದೂ ಹೇಳಿದರು.

ರಾಜ್ಯದ ಅಧಿಕಾರಿಗಳ ಪ್ರಕಾರ, ಗ್ವಾಲಿಯರ್ ಮತ್ತು ಚಂಬಲ್ ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ.

ಪ್ರಧಾನಿ ಮೋದಿ ಅವರು ಇಂದು ಮಧ್ಯಪ್ರದೇಶದಲ್ಲಿರುವ ಪಿಎಂಜಿಕೆವೈ ಫಲಾನುಭವಿಗಳೊಂದಿಗೆ ವರ್ಚುವಲ್‌ ಸಂವಾದ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು