ಶನಿವಾರ, ಜುಲೈ 2, 2022
20 °C

ಮಧ್ಯಪ್ರದೇಶದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ತೆರಿಗೆ ಮುಕ್ತ: ಸಿಎಂ ಚೌಹಾಣ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಭೋಪಾಲ್‌: ಮಧ್ಯಪ್ರದೇಶದಲ್ಲಿ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ತೆರಿಗೆ ಮುಕ್ತಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. 

ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ  ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ದೇಶದಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. 

ಇದರ ಬೆನ್ನಲೇ ಚಿತ್ರತಂಡ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದೆ.

ಓದಿ...  ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ 'ದಿ ಕಾಶ್ಮೀರ್ ಫೈಲ್ಸ್' ಚಿತ್ರತಂಡ

ವಿವೇಕ್‌ ರಂಜನ್ ಅಗ್ನಿಹೋತ್ರಿ ಅವರ ಪತ್ನಿ ಹಾಗೂ ನಟಿ ಪಲ್ಲವಿ ಜೋಶಿ, ನಿರ್ಮಾಪಕ ಅಭಿಷೇಕ್ ಅವರು ಪ್ರಧಾನಿಯವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ನರೇಂದ್ರ ಮೋದಿ ಅವರು ಚಿತ್ರತಂಡಕ್ಕೆ ಅಭಿನಂದನೆಗಳನ್ನು ಹೇಳಿರುವುದಾಗಿ ವರದಿಯಾಗಿದೆ. 

ಸಿನಿಮಾ ಜಮ್ಮು ಮತ್ತು ಕಾಶ್ಮೀರದಲ್ಲಿನ ಕಾಶ್ಮೀರಿ ಪಂಡಿತರ ಒತ್ತಾಯದ ವಲಸೆ ಹಾಗೂ ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳು, ಅನ್ಯಾಯವನ್ನು ಬಿಂಬಿಸುವ ಕಥಾ ಹಂದರವನ್ನು ಹೊಂದಿದೆ.  

ಈ ಚಿತ್ರ ನೈಜ ಘಟನೆಗಳನ್ನು ಆಧರಿಸಿರುವ ಸಿನಿಮಾ. ಅನ್ಯಾಯಕ್ಕೆ ಒಳಗಾದವರು ಮತ್ತು ಸಮಸ್ಯೆಗಳಿಗೆ ಸಿಲುಕಿರುವವರನ್ನು ಭೇಟಿ ಮಾಡಿ ಚಿತ್ರಕಥೆ ಬರೆಯಲಾಗಿದೆ ಎಂದು ಚಿತ್ರದ ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಹೇಳಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು