ಶನಿವಾರ, ಮೇ 28, 2022
22 °C

ಮಧ್ಯಪ್ರದೇಶ: ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಕ್ಕೆ ಚಿಂತನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಭೋಪಾಲ್‌, ಮಧ್ಯಪ್ರದೇಶ: ಉತ್ತರ ‍ಪ್ರದೇಶ ಸರ್ಕಾರವು ಮದರಸಾಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿದ ಬೆನ್ನಲ್ಲೇ, ಅದೇ ರೀತಿಯ ಕ್ರಮವನ್ನು ಮಧ್ಯಪ್ರದೇಶದಲ್ಲೂ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.

‘ನಮ್ಮ ರಾಜ್ಯದ ಮದರಸಾಗಳಲ್ಲೂ ಇದನ್ನು ಅನುಷ್ಠಾನಗೊಳಿಸುವ ಬಗ್ಗೆ ಪರಿಗಣಿಸಬಹುದು’ ಎಂದು ಗೃಹ ಸಚಿವ ನರೋತ್ತಮ್‌ ಮಿಶ್ರಾ ಹೇಳಿದ್ದಾರೆ. 

ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸುವ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಬಿಜೆಪಿ ಘಟಕದ ಮುಖ್ಯಸ್ಥ ವಿಷ್ಣುದತ್ ಶರ್ಮಾ, ‘ದೇಶದಾದ್ಯಂತ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ 'ಜನ ಗಣ ಮನ' ಪಠಿಸಬೇಕು. ಪಾಕಿಸ್ತಾನದಲ್ಲಿ ರಾಷ್ಟ್ರಗೀತೆ ಹಾಡಬೇಕು ಎಂದು ನಾವು ಕೇಳುತ್ತಿಲ್ಲ. ಮಧ್ಯಪ್ರದೇಶದ ಮದರಸಾ ಸಂಸ್ಥೆಗಳನ್ನು ಕೇಳುತ್ತಿದ್ದೇವೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು