ಮಂಗಳವಾರ, ಸೆಪ್ಟೆಂಬರ್ 29, 2020
22 °C

ಮಧ್ಯಪ್ರದೇಶದಲ್ಲಿ 'ರಾಮಾಯಣ ಸರ್ಕ್ಯೂಟ್' ರಾಮ ವನಗಮನ ಪಥ ಅಭಿವೃದ್ಧಿ: ಚೌಹಾಣ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಭೋಪಾಲ್: ಮಧ್ಯಪ್ರದೇಶದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ‘ರಾಮವನ ಗಮನಪಥ’ ಮತ್ತು ‘ರಾಮಾಯಣ ಸರ್ಕ್ಯೂಟ್’ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್ ತಿಳಿಸಿದ್ದಾರೆ. 

ಸ್ವಾತಂತ್ರ್ಯ ದಿನ ಸಮಾರಂಭದಲ್ಲಿ ಮಾತನಾಡಿದ ಅವರು, ‘ಅಮರಕಂಟಕ್‌ ಸರ್ಕ್ಯೂಟ್’, ‘ತೀರ್ಥಂಕರ ಸರ್ಕ್ಯೂಟ್’, ‘ಮಾ ನರ್ಮದಾ ಪರಿಕ್ರಮ’ ಅನ್ನು ಅಭಿವೃದ್ಧಿಪಡಿಸಲಾಗುವುದು. ಇದರಿಂದ ಪ್ರವಾಸೋದ್ಯಮ ಅಭಿವೃದ್ಧಿಯ ಜೊತೆಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ರಾಮವನ ಗಮನಪಥ’ವು ವನವಾಸದ ಬಳಿಕ ರಾಮ ಸಾಗಿದ ಮಾರ್ಗವನ್ನು ಬಿಂಬಿಸಲಿದೆ. ಇದನ್ನು ಚಿತ್ರಕೂಟದಿಂದ ಅಮರಕಂಟಕದ‌ವರೆಗೂ ನಿರ್ಮಿಸಲಾಗುವುದು ಎಂದು ತಿಳಿಸಿದರು. ಇದರ ಜೊತೆಗೆ, ಚಂಬಲ್ ಪ್ರಗತಿ ಮಾರ್ಗವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು