ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸ್ಯನಟ ಮುನಾವರ್‌ಗೆ ಜಾಮೀನು ನಿರಾಕರಿಸಿದ ಮಧ್ಯಪ್ರದೇಶ ಹೈಕೋರ್ಟ್‌

ಹಿಂದೂ ದೇವತೆಗಳನ್ನು ಅವಮಾನ ಮಾಡಿದ ಆರೋಪ ಪ್ರಕರಣ
Last Updated 28 ಜನವರಿ 2021, 9:03 IST
ಅಕ್ಷರ ಗಾತ್ರ

ಇಂದೋರ್‌: ಹಾಸ್ಯ ಕಾರ್ಯಕ್ರಮವೊಂದರಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದಡಿ ಶಿಕ್ಷೆಗೆ ಗುರಿಯಾಗಿರುವ ಹಾಸ್ಯನಟ ಮುನಾವರ್ ಫಾರೂಕಿಗೆ ಮಧ್ಯಪ್ರದೇಶ ಹೈಕೋರ್ಟ್ ಜಾಮೀನು ನಿರಾಕರಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಆದೇಶ ಕಾಯ್ದಿರಿಸಿದ್ದ ಹೈಕೋರ್ಟ್‌ನ ನ್ಯಾಯಮೂರ್ತಿ ರೋಹಿತ್ ಆರ್ಯ ಅವರನ್ನೊಳಗೊಂಡ ಪೀಠ ಜಾಮೀನು ನೀಡಲಾಗುವುದಿಲ್ಲ ಎಂದು ಹೇಳಿದೆ.

ಗುರುವಾರ ಜಾಮೀನು ಅರ್ಜಿ ವಜಾಗೊಳಿಸಿದ ಏಕ ಸದಸ್ಯ ಪೀಠ, ‘ನ್ಯಾಯಾಲಯವು ಎರಡೂ ಕಡೆಯವರ ಪ್ರತಿಕ್ರಿಯೆ, ಸಾಕ್ಷಿಗಳ ಹೇಳಿಕೆ ಆಧರಿಸಿ ತೀರ್ಪು ನೀಡುತ್ತದೆ. ಆದರೆ, ಈ ಪ್ರಕರಣದಲ್ಲಿ ತನಿಖೆ ಪ್ರಗತಿಯಲ್ಲಿರುವುದರಿಂದ ಜಾಮೀನು ನೀಡಲು ಸಾಧ್ಯವಿಲ್ಲ‘ ಎಂದು ಆದೇಶದಲ್ಲಿ ತಿಳಿಸಿದೆ.

ಗುಜರಾತ್‌ ಮೂಲದ ಹಾಸ್ಯನಟ ಫಾರೂಕಿ, ಇಂಧೋರ್‌ನ ಹೋಟೆಲ್‌ವೊಂದರಲ್ಲಿ ನಡೆದ ಹಾಸ್ಯ ಕಾರ್ಯಕ್ರಮದಲ್ಲಿ ಹಿಂದೂ ದೇವತೆಗಳ ಕುರಿತು ಆಕ್ಷೇಪಾರ್ಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕರೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಜನವರಿ 1ರಂದು ಪೊಲೀಸರು ಫಾರೂಕಿ ಸೇರಿದಂತೆ ನಾಲ್ವರನ್ನು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT