ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ಬಿಪಿನ್ ರಾವತ್ ಸಾವಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ, ವ್ಯಕ್ತಿ ಬಂಧನ

Last Updated 11 ಡಿಸೆಂಬರ್ 2021, 13:21 IST
ಅಕ್ಷರ ಗಾತ್ರ

ಖಾಂಡ್ವಾ: ತಮಿಳುನಾಡಿನ ಕೂನೂರಿನಲ್ಲಿ ಹೆಲಿಕಾಪ್ಟರ್‌ ಅಪಘಾತದಲ್ಲಿ ಮೃತರಾದ ಭಾರತೀಯ ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್‌) ಬಿಪಿನ್ ರಾವತ್ ಮತ್ತು ಇತರರ ವಿರುದ್ಧ ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಹೇಳಿಕೆ ಬರೆದಿರುವ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿದ್ದ ಜನರಲ್ ರಾವತ್, ಅವರ ಪತ್ನಿ ಮಧುಲಿಕಾ ಮತ್ತು ಇತರ 11 ಜನರು ಅಪಘಾತದಲ್ಲಿ ಬುಧವಾರ ಮೃತಪಟ್ಟಿದ್ದರು.

‘ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ವ್ಯಕ್ತಿಯೊಬ್ಬ ಆಕ್ಷೇಪಾರ್ಹ ಕಾಮೆಂಟ್‌ ಮಾಡಿದ್ದ. ಆ ಬಗ್ಗೆ ನಾವು ದೂರನ್ನು ಸ್ವೀಕರಿಸಿ ಶುಕ್ರವಾರ ಬಂಧಿಸಿದ್ದೇವೆ‘ ಎಂದುಖಾಂಡ್ವಾದ ಪೊಲೀಸ್‌ ವರಿಷ್ಠಾಧಿಕಾರಿ ವಿವೇಕ್ ಸಿಂಗ್ ವರದಿಗಾರರಿಗೆ ತಿಳಿಸಿದ್ದಾರೆ.

ದೂರುದಾರರು ತಮ್ಮ ಆರೋಪವನ್ನು ಸಾಬೀತುಪಡಿಸುವ ವಿಡಿಯೊ ಸಿಡಿಯನ್ನು ನೀಡಿದ್ದು ಆರೋಪಿಯನ್ನು ದುರ್ಗೇಶ್ ವಾಸ್ಕೆಲೆ ಎಂದು ಗುರುತಿಸಲಾಗಿದೆ. ನಂತರ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT