ಶುಕ್ರವಾರ, ಮೇ 27, 2022
22 °C

ಸರ್ಕಾರಿ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ ಮಧ್ಯಪ್ರದೇಶದ ಸಚಿವ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಇಂದೋರ್: ಮಧ್ಯಪ್ರದೇಶದ ಇಂಧನ ಸಚಿವ ಪ್ರದ್ಯುಮನ್ ಸಿಂಗ್ ತೋಮರ್ ಅವರು ಗ್ವಾಲಿಯರ್‌ನಲ್ಲಿರುವ ಸರ್ಕಾರಿ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸುವ ಮೂಲಕ ಮಾದರಿಯಾದರು.

ಈ ಕುರಿತು ಸುದ್ದಿ ಸಂಸ್ಥೆ 'ಎಎನ್‌ಐ' ವರದಿ ಮಾಡಿದೆ. ಶಾಲೆಯ ಶೌಚಾಲಯಗಳಲ್ಲಿ ಸ್ವಚ್ಛತೆ ಇಲ್ಲ, ಇದರಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿರುವುದಾಗಿ ವಿದ್ಯಾರ್ಥಿನಿಯೊಬ್ಬರು ಸಮಸ್ಯೆ ಹೇಳಿಕೊಂಡಿರುವುದಾಗಿ ಸಚಿವರು ತಿಳಿಸಿದರು.

 

 

 

'ನಾನು 30 ದಿನಗಳ ಸ್ವಚ್ಛತೆಗೆ ಪ್ರತಿಜ್ಞೆ ಮಾಡಿದ್ದೇನೆ. ಪ್ರತಿದಿನ ಯಾವುದಾದರೂ ಸಂಸ್ಥೆಗೆ ಹೋಗಿ ಶುಚಿಗೊಳಿಸುತ್ತೇನೆ. ಸ್ವಚ್ಛತೆಯ ಸಂದೇಶವು ಎಲ್ಲ ಜನರನ್ನು ತಲುಪಬೇಕೆಂದು ನಾನು ಬಯಸುತ್ತೇನೆ. ಎಲ್ಲರಿಗೂ ಪ್ರೇರಣೆ ಸಿಗಲಿ ಎಂಬ ಉದ್ದೇಶದೊಂದಿಗೆ ನಾನೇ ಶುಚಿಗೊಳಿಸುವ ಕಾರ್ಯವನ್ನು ಮಾಡುತ್ತಿದ್ದೇನೆ' ಎಂದು ಹೇಳಿದ್ದಾರೆ.

 

ಸ್ವಚ್ಛತೆ ಕಾಪಾಡುವಂತೆ ಜನರಲ್ಲಿ ಮನವಿ ಮಾಡುವುದರ ಜತೆಗೆ ಪ್ರತಿದಿನ ಶಾಲೆಗಳ ಶೌಚಾಲಯಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು