ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶದಲ್ಲಿ ಭಾರಿ ಮಳೆ: 1,171 ಹಳ್ಳಿಗಳಲ್ಲಿ ಪ್ರವಾಹ; ಐವರ ರಕ್ಷಣೆ

Last Updated 3 ಆಗಸ್ಟ್ 2021, 12:06 IST
ಅಕ್ಷರ ಗಾತ್ರ

ಭೋಪಾಲ್: ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಮಂಗಳವಾರ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದ್ದು, ಪ್ರವಾಹದ ನಡುವೆ ಸುಮಾರು 24 ಗಂಟೆಗಳ ಕಾಲ ಮರದ ಮೇಲೆ ಸಿಲುಕಿದ್ದ ಮೂವರನ್ನು ಮತ್ತು ಇತರ ಐವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗ್ವಾಲಿಯರ್-ಚಂಬಲ್ ಪ್ರದೇಶದ 1,171 ಹಳ್ಳಿಗಳು ಮುಂಗಾರು ಮಳೆಯ ಆರ್ಭಟಕ್ಕೆ ಪ್ರವಾಹಪೀಡಿತವಾಗಿವೆ.

ಶಿವಪುರಿ, ಶಿಯೋಪುರ್, ಗ್ವಾಲಿಯರ್ ಮತ್ತು ಡಾಟಿಯಾ ಜಿಲ್ಲೆಗಳಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ ಸೇನೆ ಕರೆಸಿಕೊಳ್ಳಲಾಗಿದೆ ಎಂದು ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ರಾಜೇಶ್ ರಾಜೋರಾ ತಿಳಿಸಿದ್ದಾರೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯಕ್ಕೆ ಎಲ್ಲ ರೀತಿಯ ಸಹಾಯ ನೀಡುವ ಭರವಸೆಯನ್ನು ಪ್ರಧಾನಿ ನೀಡಿದ್ದಾರೆ.

ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿಶೀಘ್ರದಲ್ಲೇ ವೈಮಾನಿಕ ಸಮೀಕ್ಷೆ ನಡೆಸುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ.

‘ಗ್ವಾಲಿಯರ್-ಚಂಬಲ್ ಪ್ರದೇಶದಲ್ಲಿ 1,171 ಹಳ್ಳಿಗಳು ಅತಿಯಾದ ಮಳೆಯಿಂದಾಗಿ ಹಾನಿಗೊಳಗಾಗಿವೆ. ವಿಶೇಷವಾಗಿ ಶಿವಪುರಿ ಮತ್ತು ಶಿಯೋಪುರ್‌ನಲ್ಲಿ 800 ಮಿ.ಮೀ ಮಳೆಯಾಗಿದ್ದು, ಪ್ರವಾಹ ಉಂಟಾಗಿದೆ’ ಎಂದು ಚೌಹಾಣ್‌ ಹೇಳಿದರು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ (ಎಸ್‌ಡಿಆರ್‌ಎಫ್) ತಂಡಗಳಿಂದ 1,600 ಜನರನ್ನು ರಕ್ಷಿಸಲಾಗಿದೆ. 200 ಹಳ್ಳಿಗಳು ಇನ್ನೂ ಪ್ರವಾಹ ಪೀಡಿತವಾಗಿದ್ದು, ಜನರನ್ನು ರಕ್ಷಿಸಲು ದೋಣಿಗಳನ್ನು ಬಳಸಲಾಗುತ್ತಿದೆ. ಸಂತ್ರಸ್ತರನ್ನು ಪರಿಹಾರ ಶಿಬಿರಗಳಿಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT