ಭೋಪಾಲ್: ಮಧ್ಯ ಪ್ರದೇಶದ ಹಲವೆಡೆ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಗ್ವಾಲಿಯರ್–ಚಂಬಲ್ ವಲಯದ 1,171 ಗ್ರಾಮಗಳಲ್ಲಿ ಪ್ರವಾಹ ಉಂಟಾಗಿದೆ.
ಪ್ರವಾಹಪೀಡಿತ ಶಿವಪುರಿ ಜಿಲ್ಲೆಯಲ್ಲಿ ಐವರನ್ನು ಪ್ರವಾಹದಿಂದ ರಕ್ಷಿಸಲಾಗಿದೆ. ಈ ಪೈಕಿ ಮೂವರು 24 ಗಂಟೆ ಕಾಲ ಪ್ರವಾಹದಲ್ಲಿ ಸಿಲುಕಿ ಮರವೊಂದನ್ನು ಏರಿ ಕುಳಿತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಿವಪುರಿ, ಶಿಯೋಪುರ್, ಗ್ವಾಲಿಯರ್ ಮತ್ತು ಡಾಟಿಯಾ ಜಿಲ್ಲೆಗಳಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ ಸೇನೆಗೆ ಮನವಿ ಸಲ್ಲಿಸಲಾಗಿದೆ ಎಂದು ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೇಶ್ ರಾಜೋರಾ ತಿಳಿಸಿದ್ದಾರೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದ್ದಾರೆ. ಎಲ್ಲ ರೀತಿಯ ನೆರವು ನೀಡುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.